ಆ್ಯಪ್ನಗರ

2019 ಬೆಳಗಾವಿ ಸೇನಾ ರ‍್ಯಾಲಿ: ದೇಶದಲ್ಲೇ ಮೊದಲ ಬಾರಿಗೆ ಕುಂದಾನಗರಿಯಲ್ಲಿ ಮಹಿಳೆಯರ ಭರ್ತಿ

ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಮರಾಠಾ ಲಘು ಪದಾತಿದಳ (ಎಂಎಲ್‌ಐಆರ್‌ಸಿ) ಕೇಂದ್ರದ ಶಿವಾಜಿ ಕ್ರೀಡಾಂಗಣದಲ್ಲಿ ಮಹಿಳಾ ಸೇನಾ ರ‍್ಯಾಲಿ ನಡೆಯುತ್ತಿದೆ.

Vijaya Karnataka Web 1 Aug 2019, 8:17 am
ಬೆಳಗಾವಿ: ದೇಶದಲ್ಲಿ ಮೊದಲ ಬಾರಿಗೆ ಕುಂದಾನಗರಿ ಬೆಳಗಾವಿಯಲ್ಲಿ ನಡೆಯುತ್ತಿರುವ ಭಾರತೀಯ ಸೇನಾ ರ‍್ಯಾಲಿಯಲ್ಲಿ ಭಾಗವಹಿಸಿಲು ಸಾವಿರಾರು ಮಹಿಳಾ ಮಣಿಯರು ಆಗಮಿಸಿದ್ದಾರೆ.
Vijaya Karnataka Web Belagavi


ನಸುಕಿನ ಜಾವದಲ್ಲಿ ಮಳೆಯನ್ನೂ ಲೆಕ್ಕಿಸದೆ ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಮರಾಠಾ ಲಘು ಪದಾತಿದಳ (ಎಂಎಲ್‌ಐಆರ್‌ಸಿ) ಕೇಂದ್ರದ ಶಿವಾಜಿ ಕ್ರೀಡಾಂಗಣದಲ್ಲಿ ನಡೆಯುತ್ತಿರು ಸೇನಾ ಭರ್ತಿಯಲ್ಲಿ ಭಾಗವಹಿಸಲು ಮಹಿಳೆಯರು ಕಾದು ನಿಂತಿದ್ದಾರೆ.

ಮಹಿಳಾ ಸೇನಾ ಭರ್ತಿ ಆ.1ರಿಂದ 5ರ ವರೆಗೆ ನಡೆಯಲಿದ್ದು, ಈಗಾಗಲೇ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ನೇಮಕಾತಿ ವಿಭಾಗದ ಉಪ ಮಹಾನಿರ್ದೇಶಕ ದೀಪೇಂದ್ರ ರಾವತ್‌ ತಿಳಿಸಿದರು.


ದಕ್ಷಿಣ ಭಾರತದ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಾದ ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಗಳು, ಪಾಂಡಿಚೇರಿ ರಾಜ್ಯದ ಅಭ್ಯರ್ಥಿಗಳು ಭಾಗವಹಿಸಿದ್ದಾರೆ. ರ‍್ಯಾಲಿಗಾಗಿ ಹೆಸರು ನೋಂದಾಯಿಸಿದ್ದ 15 ಸಾವಿರ ಅಭ್ಯರ್ಥಿಗಳ ಪೈಕಿ ಮೆರಿಟ್‌ ಆಧಾರದ ಮೇಲೆ ಮೂರು ಸಾವಿರ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗಿದ್ದು, ಅವರನ್ನು ಆಹ್ವಾನಿಸಲಾಗಿದೆ.

ಆಯ್ಕೆ ಪ್ರಕ್ರಿಯೆ ಸುಗಮವಾಗಿ ನಡೆಸಲು ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ ಪಾವತಿ ಆಧಾರದ ಮೇಲೆ ಊಟೋಪಹಾರ ವ್ಯವಸ್ಥೆ ಮಾಡಲಾಗಿದೆ. ಕುಡಿಯುವ ನೀರು, ಶೌಚಾಲಯ ಮತ್ತಿತರ ಮೂಲ ಸೌಕರ್ಯ ಒದಗಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ