ಆ್ಯಪ್ನಗರ

ವಾರ್ಡ್‌ ವಿಂಗಡಣೆ, ಮೀಸಲಾತಿ ವಿರುದ್ಧದ ಅರ್ಜಿ ವಿಚಾರಣೆ ಇಂದು

ಬೆಳಗಾವಿ: ರಾಜ್ಯ ಸರಕಾರ ಪ್ರಕಟಿಸಿರುವ ಮಹಾನಗರ ಪಾಲಿಕೆ ವಾರ್ಡ್‌ ಮರು ವಿಂಗಡಣೆ ಮತ್ತು ಮೀಸಲಾತಿ ಪಟ್ಟಿ ...

Vijaya Karnataka 29 Jan 2019, 5:00 am
ಬೆಳಗಾವಿ: ರಾಜ್ಯ ಸರಕಾರ ಪ್ರಕಟಿಸಿರುವ ಮಹಾನಗರ ಪಾಲಿಕೆ ವಾರ್ಡ್‌ ಮರು ವಿಂಗಡಣೆ ಮತ್ತು ಮೀಸಲಾತಿ ಪಟ್ಟಿ ವಿರುದ್ಧ ದಾಖಲಾದ ಅರ್ಜಿಯ ವಿಚಾರಣೆ ಮಂಗಳವಾರ ಧಾರವಾಡ ಹೈಕೋರ್ಟ್‌ ಪೀಠದಲ್ಲಿ ನಡೆಯಲಿದೆ.
Vijaya Karnataka Web inquiry of petition filed against ward sorting reservation today
ವಾರ್ಡ್‌ ವಿಂಗಡಣೆ, ಮೀಸಲಾತಿ ವಿರುದ್ಧದ ಅರ್ಜಿ ವಿಚಾರಣೆ ಇಂದು


ಎರಡು ತಿಂಗಳ ಹಿಂದೆ ರಾಜ್ಯ ಸರಕಾರ ಪ್ರಕಟಿಸಿದ ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್‌ಗಳ ಮರು ವಿಂಗಡಣೆ ಮತ್ತು ಮೀಸಲಾತಿ ಪಟ್ಟಿ ವಿರುದ್ಧ ಬೆಳಗಾವಿಯ ಮಾಜಿ ನಗರ ಸೇವಕರು ಸೇರಿದಂತೆ ಎಂಟು ಜನರು ನ್ಯಾಯಾಲಯದಲ್ಲಿ ದೂರು ದಾಖಲಿಸಿ ಪರಿಷ್ಕೃತ ಪಟ್ಟಿ ಕೈ ಬಿಡುವಂತೆ ಮನವಿ ಮಾಡಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ ಕೂಡ ಅಂತಿಮ ವಿಚಾರಣೆ ಪೂರ್ಣಗೊಳ್ಳುವವರೆಗೆ ಮಹಾನಗರ ಪಾಲಿಕೆಗೆ ಚುನಾವಣೆ ನಡೆಸದಂತೆ ವಾರ್ಡ್‌ ಮರು ವಿಂಗಡಣೆ ಮತ್ತು ಮೀಸಲಾತಿ ಪಟ್ಟಿಗೆ ತಡೆಯಾಜ್ಞೆ ನೀಡಿತ್ತು.

ಮಂಗಳವಾರ ಮೂರನೇ ಬಾರಿಗೆ ವಿಚಾರಣೆ ನಡೆಯಲಿದ್ದು, ಅಂತಿಮ ತೀರ್ಪು ಬರುವ ನಿರೀಕ್ಷೆ ಇದೆ ಎನ್ನುವುದು ಚುನಾವಣೆ ನಿರೀಕ್ಷೆಯಲ್ಲಿರುವ ನಗರ ಸೇವಕರ ಮಾತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ