ಆ್ಯಪ್ನಗರ

ಸದಾಶಿವ ಆಯೋಗದ ವರದಿ ಅಂಗೀಕಾರಕ್ಕೆ ಒತ್ತಾಯ

ಬೆಳಗಾವಿ: ಒಳ ಮೀಸಲಾತಿಗೆ ಸಂಬಂಧಿಸಿದ ನ್ಯಾ ಎಜೆ...

Vijaya Karnataka 31 Oct 2019, 5:00 am
ಬೆಳಗಾವಿ: ಒಳ ಮೀಸಲಾತಿಗೆ ಸಂಬಂಧಿಸಿದ ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿಯನ್ನು ರಾಜ್ಯ ಸರಕಾರ ಅಂಗೀಕರಿಸಿ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಬೇಕು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಪರಶುರಾಮ ಮರೇಗುದ್ದಿ ಒತ್ತಾಯಿಸಿದರು.
Vijaya Karnataka Web 30RAJU-5072301


ನಗರದಲ್ಲಿಬುಧವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ''ನಮ್ಮ ಬೇಡಿಕೆ ಬಹು ದಿನಗಳಿಂದ ಉಳಿದುಕೊಂಡಿದೆ. 2005ರಲ್ಲಿಆಯೋಗದ ರಚನೆಯಾಗಿ 2012ರಲ್ಲಿವರದಿ ಸಲ್ಲಿಕೆಯಾಗಿದೆ. ಹೀಗಿದ್ದರೂ ಇದುವರೆಗೆ ವರದಿ ಅಂಗೀಕರಿಸಿ ಕೇಂದ್ರಕ್ಕೆ ಕಳುಹಿಸಿಕೊಟ್ಟಿಲ್ಲ. ಸಮುದಾಯದ ಜನ ರಾಜ್ಯದಲ್ಲಿಹೆಚ್ಚಿನ ಸಂಖ್ಯೆಯಲ್ಲಿಇದ್ದಾರೆ. ರಾಜಕೀಯವಾಗಿ ನಿರ್ಣಾಯಕ ಪಾತ್ರ ವಹಿಸುತ್ತಾರೆ. ರಾಜ್ಯದಲ್ಲಿ ಉಪಚುನಾವಣೆ ನಡೆಯಲಿದೆ. ಚುನಾವಣೆ ಮುಗಿದ ಕೂಡಲೇ ವರದಿಯನ್ನು ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಬಿ.ಎಸ್‌. ಯಡಿಯೂರಪ್ಪ ಬಹಿರಂಗ ಹೇಳಿಕೆ ನೀಡಬೇಕು''ಎಂದು ಅವರು ಒತ್ತಾಯಿಸಿದರು.

ಸಂಘಟನೆಯ ಗೌರವ ಅಧ್ಯಕ್ಷ ಎಸ್‌.ಮಾರಪ್ಪ, ಬೆಳಗಾವಿ ವಿಭಾಗೀಯ ಕಾರ್ಯದರ್ಶಿ ಸೋಮು ಚೂರಿ, ಧುರೀಣ ಬಾಬು ಪೂಜೇರಿ ಹಾಗೂ ಇತರರು ಉಪಸ್ಥಿತರಿದ್ದರು.

ಚಿಕ್ಕಬಳ್ಳಾಪುರದಲ್ಲಿ7ನೇ ಕರಾಳ ದಿನ:
ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಅಂಗೀಕರಿಸುವಂತೆ ಒತ್ತಾಯಿಸಿ 2012 ಡಿಸೆಂಬರ್‌ 11ರಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಮುತ್ತಿ ಹಾಕಲು ಮುಂದಾದಾಗ ಲಾಠಿ ಪ್ರಹಾರ ಮಾಡಲಾಗಿತ್ತು. ಇದನ್ನು ಖಂಡಿಸಿ ಪ್ರತಿ ವರ್ಷ ಡಿಸೆಂಬರ್‌ 11ರಂದು ಕರಾಳ ದಿನ ಆಚರಿಸಲಾಗುತ್ತಿದೆ. 7ನೇ ಕರಾಳ ದಿನಾಚರಣೆಯನ್ನು ಚಿಕ್ಕಬಳ್ಳಾಪುರದಲ್ಲಿಆಯೋಜಿಸಲಾಗಿದೆ ಎಂದು ಪರಶುರಾಮ ಮರೇಗುದ್ದಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ