ಆ್ಯಪ್ನಗರ

ಸಂಪೂರ್ಣ ಸಾಲಮನ್ನಾಕ್ಕೆ ಒತ್ತಾಯ

ಬೆಳಗಾವಿ: ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ...

Vijaya Karnataka 19 Jun 2018, 5:00 am
ಬೆಳಗಾವಿ: ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಸೋಮವಾರ ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಿ, ಜಿಲ್ಲಾಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
Vijaya Karnataka Web BEL-18 BGM 2


ರೈತರ ಸಾಲ ಮನ್ನಾ ವಿಚಾರದಲ್ಲಿ ರಾಜ್ಯ ಸರಕಾರ ದಿನಾಂಕ ನಿಗದಿ ಮಾಡದೆ ವಿಳಂಬ ಮಾಡುತ್ತಿದೆ. ಇದರಿಂದ ರೈತರಿಗೆ ತೊಂದರೆಯಾಗುತ್ತಿದೆ. ಬ್ಯಾಂಕ್‌ನಲ್ಲಿ ಮಾಡಿರುವ ಸಾಲ ಮತ್ತು ಕೃಷಿ ಭೂಮಿಗೆ ಮಾಡುವ ವೆಚ್ಚ ರೈತರಿಗೆ ಹೊರೆಯಾಗಿದೆ. ಸರಕಾರ ಕೂಡಲೇ ಸಂಪೂರ್ಣ ಸಾಲಮನ್ನಾ ಮಾಡುವುದರಿಂದ ರೈತರ ಆತ್ಮಹತ್ಯೆಯನ್ನು ತಡೆಯಬಹುದು.

ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಮಾಲೀಕರು ರೈತರಿಗೆ ಕಬ್ಬಿನ್‌ ಬಾಕಿ ಬಿಲ್‌ ನೀಡದೆ ವಂಚಿಸುತ್ತಿದ್ದಾರೆ. ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಕ್ರಮಕ್ಕೆ ಮುಂದಾಗಿಲ್ಲ. ಸರಕಾರ ಕಡಲೆ ಖರೀದಿ ಮಾಡಿ ಐದು ತಿಂಗಳು ಕಳೆದರೂ ರೈತರ ಖಾತೆಗೆ ಹಣ ಸಂದಾಯವಾಗಿಲ್ಲ. ಕಬ್ಬಿನ್‌ ಬಾಕಿ ಹಾಗೂ ಕಡಲೆ ಖರೀದಿ ಹಣವನ್ನು ಕೂಡಲೇ ಸಂದಾಯ ಮಾಡುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಶಿವನಗೌಡಾ ಗೌಡರ, ಈರನಗೌಡಾ ಪಾಟೀಲ, ಅಣ್ಣಪ್ಪಾ ಹಳ್ಳೂರ, ಶಿವನಗೌಡಾ ಪಾಟೀಲ, ಉದಯ ಪಾಟೀಲ, ರಾಜು ದಿಗರಾಜ ಮುಂತಾದವರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ