ಆ್ಯಪ್ನಗರ

ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡಲು ಒತ್ತಾಯ

ಯರಗಟ್ಟಿ: ಎಲ್ಲ ವಿದ್ಯಾರ್ಥಿಗಳಿಗೂ ಕೂಡಲೇ ಉಚಿತ ಬಸ್‌ಪಾಸ್‌ ನೀಡಲು ಆಗ್ರಹಿಸಿ ರೈತ ಕೃಷಿ ಕಾರ್ಮಿಕ ಸಂಘಟನೆ(ಆರ್‌ಕೆಎಸ್‌) ಮತ್ತು ಆಲ್‌ ಇಂಡಿಯಾ ಡೆಮಾಕ್ರಟಿಕ್‌ ...

Vijaya Karnataka 13 Jun 2018, 5:00 am
ಯರಗಟ್ಟಿ: ಎಲ್ಲ ವಿದ್ಯಾರ್ಥಿಗಳಿಗೂ ಕೂಡಲೇ ಉಚಿತ ಬಸ್‌ಪಾಸ್‌ ನೀಡಲು ಆಗ್ರಹಿಸಿ ರೈತ ಕೃಷಿ ಕಾರ್ಮಿಕ ಸಂಘಟನೆ(ಆರ್‌ಕೆಎಸ್‌) ಮತ್ತು ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಯೂತ್‌ ಆರ್ಗನೈಸೇಷನ್‌ (ಎಐಡಿವೈಒ) ಸಂಘಟನೆಗಳಿಂದ ಗ್ರಾಮದ ನಾನಾ ಗಲ್ಲಿಗಳ ಮೂಲಕ ಪ್ರತಿಭಟನಾ ರಾರ‍ಯಲಿ ನಡೆಸಿ ಸಾರಿಗೆ ನಿಯಂತ್ರಕ ಹಾಗೂ ಉಪತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ವಾಯುವ್ಯ ಸಾರಿಗೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.
Vijaya Karnataka Web BEL-12YGTPHOTO1


ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಕಾರ‍್ಯದರ್ಶಿ ರಾಜು ಗಾಣಗಿ ಮಾತನಾಡಿ, ಈಗಾಗಲೇ ಹೊಸ ಶೈಕ್ಷ ಣಿಕ ವರ್ಷ ಪ್ರಾರಂಭವಾಗಿದ್ದು, ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಉಚಿತ ಬಸ್‌ಪಾಸ್‌ನ ನಿರೀಕ್ಷೆಯಲ್ಲಿದ್ದಾರೆ. ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡುವ ಬಗ್ಗೆ ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಇತ್ತೀಚೆಗೆ ಮುಖ್ಯಮಂತ್ರಿಗಳನ್ನು ಭೇಟಿಯಾದ ವಿದ್ಯಾರ್ಥಿ ನಾಯಕರಿಗೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದರು. ಆದರೆ ಸಾರಿಗೆ ಇಲಾಖೆಯ ಅಧಿಕಾರಿಗಳು ಪೂರ್ಣ ಪ್ರಮಾಣದ ಬಸ್‌ಪಾಸ್‌ ಹಣ ಸಂಗ್ರಹಿಸುವ ಆದೇಶ ಹೊರಡಿಸಿರುವುದು ವಿದ್ಯಾರ್ಥಿಗಳಲ್ಲಿ ಆತಂಕ ಹಾಗೂ ಗೊಂದಲ ಮೂಡಿಸಿದೆ. ಕೂಡಲೆ ಉಚಿತ ಬಸ್‌ಪಾಸ್‌ ಜಾರಿಯಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಆರ್‌ಕೆಎಸ್‌ ಜಿಲ್ಲಾ ಸಂಚಾಲಕ ಲಕ್ಕಪ್ಪ ಬಿಜ್ಜನ್ನವರ ಮಾತನಾಡಿ ಉಚಿತ ಬಸ್‌ಪಾಸ್‌ಗಾಗಿ ಒತ್ತಾಯಿಸಿದರು.

ಈ ವೇಳೆ ಮುತ್ತು ದೊಡಗೌಡ್ರ, ಮಂಜು ದಳವಾಯಿ, ಸೋಮಲಿಂಗ ಬಂಡಿಗಣಿ, ರಮೇಶ ದಳವಾಯಿ ಹಾಗೂ ನಾನಾ ಶಾಲಾ-ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ