ಆ್ಯಪ್ನಗರ

ಕೇಸ್‌ ಹಿಂಪಡೆಯಲು ಆಗ್ರಹ

ಕನ್ನಡಪರ ಹೋರಾಟಗಾರರ ಮೇಲೆ ದಾಖಲಾಗಿರುವ ಕೇಸ್‌ಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಕಾರ್ಯಕರ್ತರು ಶುಕ್ರವಾರ ಉಪಮುಖ್ಯಮಂತ್ರಿ ಜಿ...

Vijaya Karnataka 16 Dec 2018, 5:00 am
ಬೆಳಗಾವಿ: ಕನ್ನಡಪರ ಹೋರಾಟಗಾರರ ಮೇಲೆ ದಾಖಲಾಗಿರುವ ಕೇಸ್‌ಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಕಾರ್ಯಕರ್ತರು ಶುಕ್ರವಾರ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದರು. ನಾಡು, ನುಡಿ ರಕ್ಷಣೆ ವಿಷಯದಲ್ಲಿ ಹೋರಾಟ ನಡೆಸುವ ವೇಳೆ ಕರವೇ ಕಾರ್ಯಕರ್ತರ ಮೇಲೆ ಪೊಲೀಸರು ವಿವಿಧ ಕೇಸ್‌ ದಾಖಲಿಸಿದ್ದಾರೆ. ಅದೆಲ್ಲವನ್ನೂ ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸಿದರು. ಕರವೇ ಜಿಲ್ಲಾ ಘಟಕಾಧ್ಯಕ್ಷ ಮಹಾದೇವ ತಳವಾರ, ಹನುಮಂತಪ್ಪ ಅಬ್ಬಿಗೇರಿ, ಗಿರೀಶ ಬಾರ್ಕಿ, ದೇವೇಂದ್ರ ತಳವಾರ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ