ಆ್ಯಪ್ನಗರ

‘ಡಿ’ ದರ್ಜೆ ನೌಕರರನ್ನಾಗಿ ಪರಿಗಣಿಸಲು ಒತ್ತಾಯ

ಮರಕುಂಬಿ: ಕಂದಾಯ ಇಲಾಖೆಯಲ್ಲಿಸೇವೆ ಸಲ್ಲಿಸುತ್ತಿರುವ ಗ್ರಾಮ ಸಹಾಯಕರನ್ನು ...

Vijaya Karnataka 4 Nov 2019, 5:00 am
ಮರಕುಂಬಿ: ಕಂದಾಯ ಇಲಾಖೆಯಲ್ಲಿಸೇವೆ ಸಲ್ಲಿಸುತ್ತಿರುವ ಗ್ರಾಮ ಸಹಾಯಕರನ್ನು 'ಡಿ' ದರ್ಜೆ ನೌಕರರನ್ನಾಗಿ ಪರಿಗಣಿಸಲು ಸರಕಾರವನ್ನು ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಸಹಾಯಕರ ಸಂಘದ ವತಿಯಿಂದ ಉಗ್ರ ಹೋರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಬೆಳಗಾವಿ ಜಿಲ್ಲಾಗ್ರಾಮ ಸಹಾಯಕರ ಸಂಘದ ಅಧ್ಯಕ್ಷ ಮಹಾದೇವಪ್ಪ ಇಂಗಳಗಿ ಹೇಳಿದರು.
Vijaya Karnataka Web insists on being class employees
‘ಡಿ’ ದರ್ಜೆ ನೌಕರರನ್ನಾಗಿ ಪರಿಗಣಿಸಲು ಒತ್ತಾಯ


ಸಮೀಪದ ಸೊಗಲ ಕ್ಷೇತ್ರದಲ್ಲಿಭಾನುವಾರ ಗಿರಿಜಾ ಕಲ್ಯಾಣ ಮಂಟಪದಲ್ಲಿನಡೆದ ಸವದತ್ತಿ ತಾಲೂಕಿನ ಗ್ರಾಮ ಸಹಾಯಕರ ಪದಾಧಿಕಾರಿಗಳನ್ನು ಆಯ್ಕೆ ಮಾಡಿ, ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಗ್ರಾಮ ಸಹಾಯಕ ಹುದ್ದೆಯನ್ನು 'ಡಿ' ದರ್ಜೆಗೆ ಸೇರಿಸುವವರೆಗೆ ಹೋರಾಟ ಮಾಡಲಾಗುವುದು ಎಂದರು.

ರಾಜ್ಯ ಸಂಘದ ಉಪಾಧ್ಯಕ್ಷ ಮಡಿವಾಳಪ್ಪ ವಣ್ಣೂರ ಮಾತನಾಡಿ, ಈ ಹೋರಾಟಕ್ಕೆ ರಾಜ್ಯ ಪೂರ್ವಭಾವಿ ಸಭೆಯಲ್ಲಿಕೈಕೊಂಡ ನಿರ್ಣಯದಂತೆ ರಾಜ್ಯದ ಸುಮಾರು 10450 ಗ್ರಾಮ ಸಹಾಯಕರು ಭಾಗವಹಿಸಲಿದ್ದಾರೆ ಎಂದರು. ಸವದತ್ತಿ ತಾಲೂಕಿನ ಗ್ರಾಮ ಸಹಾಯಕರು, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮಡಿವಾಳಪ್ಪ ವಣ್ಣೂರ ಸ್ವಾಗತಿಸಿ, ನಿರೂಪಿಸಿದರು. ಹಜರತಶೇಖ ಸನದಿ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ