ಆ್ಯಪ್ನಗರ

ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ವಿರೋಧ

ಬೆಳಗಾವಿ: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ...

Vijaya Karnataka 18 Nov 2020, 5:00 am
ಬೆಳಗಾವಿ: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣದ) ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
Vijaya Karnataka Web 17KRV2_53
ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟಿಸಿದರು.


ಚುನಾವಣೆ ಸಂದರ್ಭದಲ್ಲಿಮರಾಠರನ್ನು ಓಲೈಸಲು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ ಸರಕಾರ 50 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರಾಧಿಕಾರ ರಚನೆ ಮಾಡುವ ಮೊದಲು ಈ ಕುರಿತು ಯಾರ ಅಭಿಮತವನ್ನೂ ಪಡೆಯದೇ ಏಕಪಕ್ಷಿಯವಾಗಿ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ. ಮೀಸಲಿಟ್ಟಿರುವ 50 ಕೋಟಿ ರೂಪಾಯಿ ಹಣ ಯಾರದ್ದು? ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ಇಟ್ಟಿರುವ ಹಣವನ್ನು ರೈತರಿಗೆ, ನೆರೆ ಸಂತ್ರಸ್ತರಿಗೆ ಕೊಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರಕಾರ ಪ್ರಾಧಿಕಾರ ರಚನೆ ನಿರ್ಧಾರ ವಾಪಸ್‌ ಪಡೆದುಕೊಳ್ಳಬೇಕು. ಇಂಥ ನಿರ್ಧಾರ ಮಾಡುವ ಮೊದಲು ರಾಜ್ಯದ ಜನತೆಯ ಅಭಿಪ್ರಾಯ ಪಡೆಯಬೇಕು ಎಂದು ಮನವಿ ಮೂಲಕ ಆಗ್ರಹಿಸಿದರು.

ಕನ್ನಡ ಪರ ಹೋರಾಟಗಾರ್ತಿ ಕಸ್ತೂರಿ ಭಾವಿ ಮೊದಲಾದವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ