ಆ್ಯಪ್ನಗರ

ನೀರಿಗಾಗಿ ಸಿಎಂ ಭೇಟಿ ಮಾಡಿದ ಕೃಷ್ಣಾ ಹೋರಾಟ ಸಮಿತಿ ಸದಸ್ಯರು

ಅಥಣಿ: ''ಕೃಷ್ಣಾ ನದಿಗೆ ನೀರು ಹರಿಸುವ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದೇನೆ...

Vijaya Karnataka 8 Jun 2019, 5:00 am
ಅಥಣಿ : ''ಕೃಷ್ಣಾ ನದಿಗೆ ನೀರು ಹರಿಸುವ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದೇನೆ. ಈ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಜತೆ ಮಾತನಾಡಲು ಸಮಯ ಕೇಳಲಾಗಿದೆ. ಅವರು ಸಮಯ ನೀಡಿದ ಕೂಡಲೇ ಅಥಣಿ ಶಾಸಕ ಮಹೇಶ ಕುಮಠಳ್ಳಿ, ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಹಾಗೂ ಕೃಷ್ಣಾ ನದಿ ಪಾತ್ರದ ಎಲ್ಲ ಶಾಸಕರ ನಿಯೋಗದೊಂದಿಗೆ ಮುಂಬಯಿಗೆ ತೆರಳಿ ನೀರು ಬಿಡುವಂತೆ ಕೋರಲಾಗುವುದು'' ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.
Vijaya Karnataka Web BEL-07 ATHANI-03


ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾದ ಅಥಣಿ ತಾಲೂಕಿನ ಕೃಷ್ಣಾ ಹೋರಾಟ ಸಮಿತಿ ಸದಸ್ಯರಿಗೆ ಅವರು ಈ ಮಾಹಿತಿ ನೀಡಿದ್ದಾರೆ.

''ಎರಡು ತಿಂಗಳಿನಿಂದ ಕೃಷ್ಣಾ ನದಿಯಲ್ಲಿ ನೀರು ಇಲ್ಲದೆ ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟ ಜಿಲ್ಲೆಗಳ ಅನೇಕ ತಾಲೂಕುಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿರುವುದು ನನ್ನ ಗಮನಕ್ಕೆ ಬಂದಿದ್ದು, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು'' ಎಂದು ಅವರು ಹೇಳಿದರು.

ನಿಯೋಗದ ನೇತೃತ್ವ ವಹಿಸಿದ್ದ ಅಥಣಿ ಶಾಸಕ ಮಹೇಶ ಕುಮಠಳ್ಳಿ ಮಾತನಾಡಿ, '' ಕೃಷ್ಣಾ ನದಿಯಲ್ಲಿ ನೀರು ಬತ್ತಿದ್ದರಿಂದ ಅಥಣಿ ಹಾಗೂ ಕಾಗವಾಡ ತಾಲೂಕುಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಿದೆ. ಬಹುತೇಕ ಕೊಳವೆ ಬಾವಿಗಳು ಕೂಡ ಬತ್ತಿದ್ದರಿಂದ ಟ್ಯಾಂಕರ್‌ ಮೂಲಕವೂ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ, ಹೀಗಾಗಿ ತುರ್ತಾಗಿ ಕೃಷ್ಣಾ ನದಿಗೆ ನೀರು ಹರಿಸಲು ಕ್ರಮ ಕೈಗೊಳ್ಳಬೇಕು'' ಎಂದರು.

ಕಾಗವಾಡ ಶಾಸಕ ಶ್ರೀಮಂತ ಪಾಟೀಲ, ಕೆಪಿಸಿಸಿ ಸದಸ್ಯ ಕಿರಣಕುಮಾರ ಪಾಟೀಲ, ಕರವೇ ಮುಖಂಡ ಬಸನಗೌಡ ಪಾಟೀಲ, ವಿಜಯಕುಮಾರ ಅಡಹಳ್ಳಿ, ರಮೇಶ ಬಾದವಾಡಗಿ, ವೆಂಕಟೇಶ ದೇಶಪಾಂಡೆ, ದೀಪಕ ಶಿಂಧೆ, ಮಂಜು ಹೊಳಿಕಟ್ಟಿ, ರಾಕೇಶ ಮೈಗೂರ, ದೀಪಕ ಕಾಂಬಳೆ, ಗುತ್ತಿಗೆ ಪೌರಕಾರ್ಮಿಕರ ಸಂಘದ ರವಿ ಕಾಂಬಳೆ, ಶ್ರೀಶೈಲ ಪೂಜಾರಿ, ಭಾರತೀಯ ಕಿಸಾನ್‌ ಸಂಘದ ಅಶೋಕ ದಾನಗೌಡರ ಇತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ