ಆ್ಯಪ್ನಗರ

‘ಸ್ಮಾರ್ಟ್‌’ ಕಾಮಗಾರಿ ತ್ವರಿತವಾಗಲಿ

ಬೆಳಗಾವಿ: ದಂಡು ಮಂಡಳಿಗೆ ಸೇರಿದ ಜಾಗದಲ್ಲಿಸ್ಮಾರ್ಟ್‌ ಸಿಟಿ, ಪಾಲಿಕೆ, ಸಾರಿಗೆ ಸಂಸ್ಥೆಯ ಯಾವುದೇ ...

Vijaya Karnataka 12 Oct 2019, 5:00 am
ಬೆಳಗಾವಿ: ದಂಡು ಮಂಡಳಿಗೆ ಸೇರಿದ ಜಾಗದಲ್ಲಿಸ್ಮಾರ್ಟ್‌ ಸಿಟಿ, ಪಾಲಿಕೆ, ಸಾರಿಗೆ ಸಂಸ್ಥೆಯ ಯಾವುದೇ ಕಾಮಗಾರಿ ಆರಂಭಿಸಲು ಅಥವಾ ಜಾಗ ಸ್ವಾಧೀನಕ್ಕೆ 2016ರ ಸುತ್ತೋಲೆಯ ಪ್ರಕಾರ ಜಿಲ್ಲಾಧಿಕಾರಿಗಳ ಮೂಲಕ ಅನುಮತಿ ಪಡೆದುಕೊಳ್ಳಬೇಕು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಸೂಚಿಸಿದರು.
Vijaya Karnataka Web 11 LBS 6_53


ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಶುಕ್ರವಾರ ಜರುಗಿದ ಸ್ಮಾರ್ಟ್‌ ಸಿಟಿ ಹಾಗೂ ನಗರೋತ್ಥಾನ ಯೋಜನೆಗಳ ತುರ್ತು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಆಯಾ ಇಲಾಖೆಗಳ ಜಂಟಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸ್ಮಾರ್ಟ್‌ ಸಿಟಿ ಯೋಜನೆಗೆ ಸಂಬಂಧಿಸಿದ ಯಾವುದೇ ಕಾಮಗಾರಿಗಳು ಬಾಕಿ ಉಳಿಯದಂತೆ ಕೆಲಸ ಮಾಡಬೇಕು. ಕಾಮಗಾರಿಗಳನ್ನು ಕೈಗೊಳ್ಳುವ ಮೊದಲು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಹೆಸ್ಕಾಂ, ಬಿಎಸ್‌ಎನ್‌ಎಲ್‌ ಹಾಗೂ ಮಹಾನಗರ ಪಾಲಿಕೆ ಸಮನ್ವಯದೊಂದಿಗೆ ನಿರ್ಧಾರ ಕೈಗೊಳ್ಳಬೇಕು ಎಂದರು.

ಡಿಸಿ ಅಧ್ಯಕ್ಷತೆಯಲ್ಲಿಸಭೆ: ಯಾವುದೇ ಹೊಸ ಯೋಜನೆಯ ಪ್ರಸ್ತಾವ ಸಲ್ಲಿಸುವಾಗ ಪಾಲುದಾರ ಇಲಾಖೆಯ ಜತೆ ಸಮಗ್ರವಾಗಿ ಚರ್ಚಿಸಿ ಸೂಕ್ತ ಯೋಜನೆ ರೂಪಿಸಬೇಕು. ಪ್ರತಿ 15 ದಿನಗಳಿಗೊಮ್ಮೆ ಸಮನ್ವಯ ಸಭೆ ನಡೆಸಬೇಕು. ಮುಂಬರುವ ದಿನಗಳಲ್ಲಿಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿಸಮನ್ವಯ ಸಭೆ ನಡೆಸಬೇಕು ಎಂದು ತಿಳಿಸಿದರು.

ನಾನಾವಾಡಿ ರಸ್ತೆ ವಿಸ್ತರಣೆಗೆ, ಗೋಗಟೆ ವೃತ್ತದಿಂದ ನಾನಾವಾಡಿ ಕ್ರಾಸ್‌ ವರೆಗೆ ಫುಟ್‌ಪಾತ್‌ ಅಭಿವೃದ್ಧಿ ಪಡಿಸಲು ಮತ್ತು ಸೈಕಲ್‌ ಟ್ರ್ಯಾಕ್‌ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಿರಾಕ್ಷೇಪಣ ಪತ್ರ ಪಡೆಯುವ ಕುರಿತು ಸಭೆಯಲ್ಲಿಚರ್ಚಿಸಲಾಯಿತು.

ದಂಡುಮಂಡಳಿ ವ್ಯಾಪ್ತಿಯಲ್ಲಿಬೀದಿದೀಪ ನಿರ್ವಹಣೆ ಹಾಗೂ ಬಿಲ್‌ನ್ನು ರಾಜ್ಯ ಸರಕಾರದ ವತಿಯಿಂದ ಪಾವತಿಸಲು ಕ್ರಮಕೈಗೊಳ್ಳಬೇಕು ಮತ್ತು ಖಸಾಯಿಖಾನೆ ನಿರ್ಮಾಣಕ್ಕೆ ಬೇರೆ ಕಡೆ ಜಾಗ ಒದಗಿಸಬೇಕು ಎಂದು ದಂಡುಮಂಡಳಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬರ್ಚಸ್ವಾ ಮನವಿ ಮಾಡಿದರು.

ಮಹಾನಗರ ಪಾಲಿಕೆ ಆಯುಕ್ತ ಜಗದೀಶ್‌ ಕೆ.ಎಚ್‌. ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಂಬರುವ ದಿನಗಳಲ್ಲಿದಂಡುಮಂಡಳಿ ವ್ಯಾಪ್ತಿಯ ಜಾಗದಲ್ಲಿಸ್ಮಾರ್ಟ್‌ ಸಿಟಿ ಯೋಜನೆಯ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಾದರೆ ಜಿಲ್ಲಾಧಿಕಾರಿ ಮೂಲಕ ಪ್ರಸ್ತಾವ ಸಲ್ಲಿಸಿ, ಅನುಮತಿ ಪಡೆದುಕೊಳ್ಳಬೇಕು.
- ಸುರೇಶ ಅಂಗಡಿ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ

ಮಹಾನಗರ ಪಾಲಿಕೆ ಅಥವಾ ಸ್ಮಾರ್ಟ್‌ ಸಿಟಿ ಯೋಜನೆಯಡಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಅಗತ್ಯವಿರುವ ಜಾಗ ಮತ್ತು ಯೋಜನೆಯ ರೂಪುರೇಷೆ ಕುರಿತು ನಿಗದಿತ ನಮೂನೆಯಲ್ಲಿಮಾಹಿತಿ ನೀಡಿದರೆ ಎನ್‌ಓಸಿ ನೀಡುವ ಬಗ್ಗೆ ಪರಿಶೀಲಿಸಿ ತಕ್ಷಣ ಕ್ರಮ ಕೈಗೊಳ್ಳಲಾವುದು.
- ಗೋವಿಂದ ಕಾಲವಾಡ, ಕಂಟೋನ್ಮೆಟ್‌ ಅಧ್ಯಕ್ಷ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ