ಆ್ಯಪ್ನಗರ

ಐಟಿ ದಾಳಿ ತಡೆಗೆ ಆಯೋಗ ಕ್ರಮ ಜರುಗಿಸಲಿ

''ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ನಾಯಕರನ್ನೇ ಗುರಿಯಾಗಿಸಿಕೊಂಡು ಐಟಿ ದಾಳಿ ನಡೆಸಲಾಗುತ್ತಿದ್ದು, ...

Vijaya Karnataka 11 Apr 2019, 5:00 am
ಚಿಕ್ಕೋಡಿ: ''ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ನಾಯಕರನ್ನೇ ಗುರಿಯಾಗಿಸಿಕೊಂಡು ಐಟಿ ದಾಳಿ ನಡೆಸಲಾಗುತ್ತಿದ್ದು, ಇದು ಸರಿಯಲ್ಲ. ಈ ಬಗ್ಗೆ ಚುನಾವಣಾ ಆಯೋಗವೇ ಕ್ರಮ ಕೈಗೊಳ್ಳಬೇಕು'' ಎಂದು ಸಚಿವ ಆರ್‌.ವಿ. ದೇಶಪಾಂಡೆ ಆಗ್ರಹಿಸಿದರು.
Vijaya Karnataka Web PRAKAS HUKKERI 1


ನಿಪ್ಪಾಣಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಸಂಸದ ಪ್ರಕಾಶ ಹುಕ್ಕೇರಿ ಅವರಿಗೆ ನೂರಾರು ಬೆಂಬಲಿಗರಿದ್ದಾರೆ. ಐಟಿ ದಾಳಿ ಯಾರ ಮನೆ ಮೇಲೆ ನಡೆದಿದೆ ಎಂಬ ಸ್ಪಷ್ಟ ಮಾಹಿತಿಯಿಲ್ಲ. ಐಟಿ ದಾಳಿ ನಡೆದ ಕಾರ್ಯಕರ್ತರು ಯಾವ ಪಕ್ಷ ಕ್ಕೆ ಸೇರಿದ್ದಾರೆಂಬ ಮಾಹಿತಿಯಿಲ್ಲ. ಆದರೂ ಚುನಾವಣೆ ಸಂದರ್ಭದಲ್ಲಿ ಯಾವುದೇ ಪಕ್ಷ ದ ನಾಯಕರು ಮತ್ತು ಕಾರ್ಯಕರ್ತರ ಮನೆಯ ಮೇಲೆ ಐಟಿ ದಾಳಿ ಮಾಡುವುದು ಸರಿಯಲ್ಲ. ಇಂತಹ ಘಟನೆಗಳಿಂದ ಜನರ ಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ'' ಎಂದರು.

ಜನ ರೊಚ್ಚಿಗೇಳುತ್ತಾರೆ: ಸಂಸದ ಹುಕ್ಕೇರಿ
ಸಂಸದ ಪ್ರಕಾಶ ಹುಕ್ಕೇರಿ ಮಾತನಾಡಿ, ''ಗುತ್ತಿಗೆದಾರರ ಮೇಲೆ ನಡೆದಿರುವ ಐಟಿ ದಾಳಿ ಪಕ್ಷ ಕ್ಕೆ ಸಂಬಂಧಿಸಿದ್ದಲ್ಲ. ಗುತ್ತಿಗೆದಾರರು ತಮ್ಮ ಕೆಲಸ ಮಾಡುತ್ತಿರುತ್ತಾರೆ. ಅವರು ಯಾವ ಪಕ್ಷ ದ ಪರವಾಗಿಯೂ ಇರುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ಗುತ್ತಿಗೆದಾರರ ಮನೆ ಮೇಲೆ ಐಟಿ ದಾಳಿ ನಡೆಸಿರುವುದು ಸರಿಯಲ್ಲ. ಇಂತಹ ಘಟನೆಗಳಿಂದ ಗುತ್ತಿಗೆದಾರರಲ್ಲಿ ಭಯದ ವಾತಾವರಣ ಸೃಷ್ಟಿಯಾಗುತ್ತದೆ. ಇದರಿಂದಾಗಿ ಜನ ರೊಚ್ಚಿಗೇಳುವ ಸಾಧ್ಯತೆಗಳಿವೆ'', ಎಂದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ