ಆ್ಯಪ್ನಗರ

ಮೈತ್ರಿ ಸರಕಾರದ ಶಾಸಕರಿಗೆ ಆಮಿಷ; ಕಾಂಗ್ರೆಸ್‌ ಪ್ರತಿಭಟನೆ

ಬೆಳಗಾವಿ: ಬಿಜೆಪಿಯವರು ಮೈತ್ರಿ ಸರಕಾರದ ಶಾಸಕರಿಗೆ ಹಣದ ಆಮಿಷ ಒಡ್ಡಿ ರಾಜೀನಾಮೆ ಕೊಡಿಸುತ್ತಿದ್ದಾರೆ ಎಂದು ಆರೋಪಿಸಿದ ಮಹಾನಗರ ಮತ್ತು ಗ್ರಾಮೀಣ ಕಾಂಗ್ರೆಸ್‌ ...

Vijaya Karnataka 10 Jul 2019, 5:00 am
ಬೆಳಗಾವಿ : ಬಿಜೆಪಿಯವರು ಮೈತ್ರಿ ಸರಕಾರದ ಶಾಸಕರಿಗೆ ಹಣದ ಆಮಿಷ ಒಡ್ಡಿ ರಾಜೀನಾಮೆ ಕೊಡಿಸುತ್ತಿದ್ದಾರೆ ಎಂದು ಆರೋಪಿಸಿದ ಮಹಾನಗರ ಮತ್ತು ಗ್ರಾಮೀಣ ಕಾಂಗ್ರೆಸ್‌ ಘಟಕದ ಕಾರ್ಯಕರ್ತರು ಸೋಮವಾರ ನಗರದ ಆರ್‌ಟಿಒ ವೃತ್ತದಲ್ಲಿ ಪ್ರತಿಭಟಿಸಿದರು.
Vijaya Karnataka Web BEL-9 LBS 3


ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿ ನಾಯಕರು ಶಾಸಕರ ಖರೀದಿಗೆ ಯತ್ನಿಸುತ್ತಿದ್ದಾರೆ. ಮೈತ್ರಿ ಸರಕಾರ ಅಸ್ಥಿರಗೊಳಿಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಈಗ ಕೇಂದ್ರ ಸರಕಾರದ ತನಿಖಾ ಸಂಸ್ಥೆಗಳನ್ನು ಮುಂದಿಟ್ಟುಕೊಂಡು ಶಾಸಕರನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯದ ಬಿಜೆಪಿ ನಾಯಕರು ಪ್ರಜಾಪ್ರಭುತ್ವ ವಿರೋಧಿ ಕೆಲಸ ಮಾಡುತ್ತಿದ್ದಾರೆ. ನೂರಾರು ಕೋಟಿ ರೂ. ಹಣದ ಆಮಿಷ ಒಡ್ಡಿ ಮೈತ್ರಿ ಸರಕಾರದ ಶಾಸಕರನ್ನು ಖರೀದಿ ಮಾಡುತ್ತಿದ್ದಾರೆ. ಈಗಾಗಲೇ ಮೈತ್ರಿ ಸರಕಾರದ ಶಾಸಕರನ್ನು ಮುಂಬೈಗೆ ಕರೆದುಕೊಂಡು ಹೋಗಿದ್ದಾರೆ. ಆದ್ದರಿಂದ ಸ್ಪೀಕರ್‌ ರಮೇಶಕುಮಾರ ಅವರು ಶಾಸಕರ ರಾಜೀನಾಮೆ ಅಂಗೀಕರಿಸಬಾರದು. ಸಮಗ್ರ ತನಿಖೆ ನಡೆಸಬೇಕು ಎಂದು ಅಗ್ರಹಿಸಿದರು.

ಕಾಂಗ್ರೆಸ್‌ ಗ್ರಾಮೀಣ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ಪರಶುರಾಮ ವಗ್ಗಣ್ಣವರ, ಜಯಶ್ರೀ ಮಾಳಗಿ, ಜಯಶ್ರೀ ಹಿರೇಮಠ, ದೀಪಕ ರಾಯಣ್ಣವರ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ