ಆ್ಯಪ್ನಗರ

ಮಲೇರಿಯಾ, ನಿಫಾ ವೈರಾಣು ಜ್ವರ ಜಾಗೃತಿ ಜಾಥಾ

ರಾಮದುರ್ಗ: ಪಟ್ಟಣದ ಸರಕಾರಿ ಆಸ್ಪತ್ರೆ ಆವರಣದಲ್ಲಿ ಡೆಂಗ್ಯೂ ಜ್ವರದ ನಿಯಂತ್ರಣ ಹಾಗೂ ನಿಫಾ ವೈರಾಣು ಜ್ವರದ ಕುರಿತು ನಡೆದ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು...

Vijaya Karnataka 27 May 2018, 5:00 am
ರಾಮದುರ್ಗ: ಪಟ್ಟಣದ ಸರಕಾರಿ ಆಸ್ಪತ್ರೆ ಆವರಣದಲ್ಲಿ ಡೆಂಗ್ಯೂ ಜ್ವರದ ನಿಯಂತ್ರಣ ಹಾಗೂ ನಿಫಾ ವೈರಾಣು ಜ್ವರದ ಕುರಿತು ನಡೆದ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು.
Vijaya Karnataka Web BEL-26RD8


ಜಾಥಾಕ್ಕೆ ಶಾಸಕ ಮಹಾದೇವಪ್ಪ ಯಾದವಾಡ ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಜಾಥಾಕ್ಕೆ ಚಾಲನೆ ನೀಡಿದ ಶಾಸಕ ಮಹಾದೇವಪ್ಪ ಯಾದವಾಡ ಮಾತನಾಡಿ, ಗ್ರಾಮೀಣ ಭಾಗದ ಜನರಲ್ಲೂ ನಿಫಾ ವೈರಾಣು ಜ್ವರದ ಕುರಿತು ತಿಳಿವಳಿಕೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕಾಟಾಚಾರದ ಜಾಥಾ: ಪಟ್ಟಣದ ಪ್ರಮುಖ ಗಲ್ಲಿ ಗಲ್ಲಿಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಬೇಕಾಗಿದ್ದ ಜಾಥಾ ಕಾಟಾಚಾರಕ್ಕೆ ಎಂಬಂತೆ ಸರಕಾರಿ ಆಸ್ಪತ್ರೆಯಿಂದ ನೇರವಾಗಿ ಮುಖ್ಯ ರಸ್ತೆ ಮೂಲಕ ಮಿನಿ ವಿಧಾನಸೌಧ ತಲುಪಿ ಮುಕ್ತಾಯಗೊಂಡಿದ್ದು ಸಾರ್ವಜನಿಕರಲ್ಲಿ ಬೇಸರವನ್ನು ಉಂಟು ಮಾಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ