ಆ್ಯಪ್ನಗರ

ಗೋಡೆ ಕುಸಿದು ವ್ಯಕ್ತಿ ಸಾವು

ತಾಲೂಕಿನ ಕಸಮಳಗಿ ಗ್ರಾಮದಲ್ಲಿ ಭಾನುವಾರ ರಾತ್ರಿ...

Vijaya Karnataka 21 Oct 2019, 5:00 am
ಖಾನಾಪುರ: ತಾಲೂಕಿನ ಕಸಮಳಗಿ ಗ್ರಾಮದಲ್ಲಿಭಾನುವಾರ ರಾತ್ರಿ ಮನೆಯ ಮಣ್ಣಿನ ಗೋಡೆ ಕುಸಿದು ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ.
Vijaya Karnataka Web man killed falling wall
ಗೋಡೆ ಕುಸಿದು ವ್ಯಕ್ತಿ ಸಾವು


ಕಸಮಳಗಿ ಗ್ರಾಮದ ನಿವಾಸಿ, ಸೆಂಟ್ರಿಂಗ್‌ ಉದ್ಯೋಗಿ ಲಿಯಾಕತ್‌ ಮತಾಬಸಾಬ್‌ ಮಕಾನದಾರ್‌(58) ಮೃತಪಟ್ಟ ವ್ಯಕ್ತಿ. ಭಾನುವಾರ ಎಂದಿನಂತೆ ತಮ್ಮ ಕೆಲಸ ಮುಗಿಸಿಕೊಂಡು ಮನೆಗೆ ಬಂದ ಲಿಯಾಕತ್‌ ಮನೆಯ ಕೋಣೆಯಲ್ಲಿಗೋಡೆಗೆ ಒರಗಿ ಕುಳಿತ ಸಂದರ್ಭದಲ್ಲಿಗೋಡೆ ಕುಸಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ. ನಂದಗಡ ಪೊಲೀಸ್‌ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ