ಆ್ಯಪ್ನಗರ

ಬೆಳಗಾವಿ: ಮನೆ ಕುಸಿದು ಏಳು ಮಂದಿ ದುರ್ಮರಣ, ಪರಿಹಾರ ಚೆಕ್‌ ವಿತರಿಸಿದ ಸಚಿವ

ಮೃತ ಪಟ್ಟ ಎಲ್ಲರಿಗೂ ರಾಜ್ಯ ಸರಕಾರದಿಂದ ತಲಾ ಐದು ಲಕ್ಷ ರೂ. ಪರಿಹಾರ ಚೆಕ್ ಅನ್ನು ಗೋವಿಂದ ಕಾರಜೋಳ ನೀಡಿದರು. ಪ್ರಧಾನಮಂತ್ರಿ ಪರಿಹಾರ ನಿಧಿಯಿಂದಲೂ ತಲಾ ಎರಡು ಲಕ್ಷ ರೂ. ಪರಿಹಾರ ನೀಡಲು ಸ್ವತಃ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

Vijaya Karnataka Web 7 Oct 2021, 4:20 pm
ಬೆಳಗಾವಿ: ಭಾರೀ ಮಳೆಯಿಂದ ಮನೆ ಗೋಡೆ ಕುಸಿದು ಏಳು ಜನ ಮೃತಪಟ್ಟ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಪರಿಹಾರ ಚೆಕ್ ವಿತರಣೆ ಮಾಡಿದರು.
Vijaya Karnataka Web ಗೋವಿಂದ ಕಾರಜೋಳ
ಗೋವಿಂದ ಕಾರಜೋಳ


ಗುರುವಾರ ಬೆಳಗಾವಿ ತಾಲೂಕಿನ ಬಡಾಲ್ ಅಂಕಲಗಿ ಗ್ರಾಮಕ್ಕೆ ಭೇಟಿ ನೀಡಿದ ಅವರು, ಮೃತ ಪಟ್ಟ ಎಲ್ಲರಿಗೂ ರಾಜ್ಯ ಸರಕಾರದಿಂದ ತಲಾ ಐದು ಲಕ್ಷ ರೂ. ಪರಿಹಾರ ಚೆಕ್ ನೀಡಿದರು.

ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದಲೂ ತಲಾ ಎರಡು ಲಕ್ಷ ರೂ. ಪರಿಹಾರ ನೀಡಲು ಸ್ವತಃ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಜತೆಗೆ‌ ದುರ್ಘಟನೆಯಲ್ಲಿ ಮೃತಪಟ್ಟ ಬಾಲಕಿಯರಿಗೂ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ತಲಾ ಒಂದು ಲಕ್ಷ ರೂ. ಪರಿಹಾರ ನೀಡುವುದಾಗಿ ಸಚಿವ ಗೋವಿಂದ ಕಾರಜೋಳ ಭರವಸೆ ನೀಡಿದರು.

ವರುಣದ ರೂಪದಲ್ಲಿ ಬಂದ ಜವರಾಯ.. ಭಾರೀ ಮಳೆಗೆ ಮನೆ ಕುಸಿದು ಒಂದೇ ಕುಟುಂಬದ ಏಳು ಮಂದಿ ಸಾವು

ಭಾರಿ ಮಳೆಯಿಂದ ಬುಧವಾರ ಸಂಜೆ ಮನೆ ಗೋಡೆ ಕುಸಿದು ಒಂದೇ ಕುಟುಂಬ ಆರು ಜನ ಮತ್ತು ನೆರೆ ಮನೆಯ ಬಾಲಕಿ ಸೇರಿದಂತೆ ಏಳು ಜನರು ಮೃತಪಟ್ಟಿದ್ದರು.

ದುರ್ಘಟನೆ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸಾರ್ಜನಿಕರು, ಗ್ರಾಪಂ ಸದಸ್ಯರು, ಹಿರೇಬಾಗೇವಾಡಿ ಠಾಣೆ ಪೊಲೀಸರು ಮೃತ ದೇಹ ಹೊರತೆಗೆದು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು.
ಕರ್ನಾಟಕಕ್ಕೆ ಹಂಚಿಕೆಯಾದ ನೀರನ್ನು ಸದ್ಬಳಕೆ ಮಾಡಿಕೊಳ್ಳಲು ಸರ್ಕಾರ ಬದ್ಧ -ಗೋವಿಂದ ಕಾರಜೋಳ

ಏಳು ಜನರ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದರು. ಮೃತರ ಮರಣೊತ್ತರ ಪರೀಕ್ಷೆ ನಡೆಯಿಸಿ ರಾತ್ರಿ ಎರಡು ಗಂಟೆ ಹೊತ್ತಿನಲ್ಲಿ ಗ್ರಾಮದ ಹದ್ದಿಯಲ್ಲಿ ಗ್ರಾಮಸ್ತರೆಲ್ಲರೂ ಸೇರಿ ಮೃತರ ಸಾಮೂಹಿಕ ಅಂತ್ಯ ಸಂಸ್ಕಾರ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ