ಆ್ಯಪ್ನಗರ

ಗ್ರಾಮ ಪಂಚಾಯಿತಿ ಚುನಾವಣೆ:ಬೆಳಗಾವಿ ಜಿಲ್ಲೆಯಲ್ಲಿ ಗೆಲುವಿಗೆ ರಮೇಶ್ ಜಾರಕಿಹೊಳಿ ತಂತ್ರ

ಗ್ರಾಮ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಗೆಲ್ಲಲು ರಮೇಶ್ ಜಾರಕಿಹೊಳಿ ತಂತ್ರ ರೂಪಿಸುತ್ತಿದ್ದು ಈ ನಿಟ್ಟಿನಲ್ಲಿ ಬೆಳಗಾವಿಯಲ್ಲಿ ಬುಧವಾರ ಸಭೆ ನಡೆಸಿದರು. ಈ ಕುರಿತಾದ ಮಾಹಿತಿ ಇಲ್ಲಿದೆ.

Vijaya Karnataka Web 2 Dec 2020, 3:16 pm
ಬೆಳಗಾವಿ : 'ಬೆಳಗಾವಿ ಜಿಪಂ. ಚುನಾವಣೆಯಲ್ಲಿ 90 ಸ್ಥಾನಗಳ ಪೈಕಿ‌ 85 ಸ್ಥಾನ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆ ನಮ್ಮ ಮೇಲಿದೆ. ಇದರಿಂದ ಕಾರ್ಯಕರ್ತರು ಗ್ರಾಪಂ. ಎಲೆಕ್ಷನ್ ಜತೆಗೆ ಜಿಪಂ. ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಿ' ಅಂತಾ ಸಚಿವ ರಮೇಶ್ ಜಾರಕಿಹೊಳಿ ಕಾರ್ಯಕರ್ತರಿಗೆ ಕರೆ ನೀಡಿದರು.
Vijaya Karnataka Web ramesh


ಬೆಳಗಾವಿಯ ಧರ್ಮನಾಥ್ ಭವನದಲ್ಲಿ ಆಯೋಜಿಸಿದ್ದ ಗ್ರಾಮ ಸ್ವರಾಜ್ಯ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಿಜೆಪಿ ಕಾರ್ಯಕರ್ತರು ಗಂಭೀರವಾಗಿ ಪರಿಗಣಿಸಿಬೇಕು. ಅತೀ ಹೆಚ್ಚು ಗ್ರಾಪಂ. ಬಿಜೆಪಿಗೆ ತೆಕ್ಕೆಗೆ ತೆಗೆದುಕೊಳ್ಳಬೇಕಿದೆ ಎಂದರು.

ಸಚಿವ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಜಿಲ್ಲೆ ಎಲ್ಲ ಗ್ರಾಮದಲ್ಲಿಯೂ ಸಂಚಾರ ಮಾಡಲಾಗುತ್ತಿದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜಾತಿ, ಭಾಷೆಯನ್ನು ಬದಿಗಿಟ್ಟು ಕೆಲಸ ಮಾಡಬೇಕು. ಈ ಚುನಾವಣೆ ಮಹತ್ವದ್ದಾಗಿದ್ದು, ಮುಂದಿನ ಚುನಾವಣೆಗೆ ದಿಕ್ಸೂಚಿಯಾಗಲಿದೆ' ಎಂದು ಹೇಳಿದರು.

'ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ಒತ್ತಾಯ ಬಂದಿರುವುದು ನಿಜ';ಸತೀಶ್ ಜಾರಕಿಹೊಳಿ

ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಯಾರೇ ಆಗಿದ್ದರು ಸಹ ಅವರನ್ನು ಗೆಲ್ಲಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ. ಬಿಜೆಪಿ ಪಕ್ಷ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದೆ . ಆದ್ದರಿಂದಲೇ ದೊಡ್ಡ ಪಕ್ಷವಾಗಿದೆ. ಒಗ್ಗಟ್ಟಿನಿಂದ ಏನಾದರು ಮಾಡಬಹುದು ಎನ್ನುವುದಕ್ಕೆ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಸಾಕ್ಷಿ ಎಂದರು.

ಈ ಸಂದರ್ಭದಲ್ಲಿ ಶಾಸಕ ಮಹಾಂತೇಶ ದೊಡ್ಡಗೌಡ, ಕಾಡಾ ಅಧ್ಯಕ್ಷ ಡಾ. ವಿಶ್ವನಾಥ ಪಾಟೀಲ, ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಈರಣ್ಣಾ ಅಂಗಡಿ, ಮಾಜಿ ಸಚಿವ ಶಶಿಕಾಂತ ನಾಯಿಕ, ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಡಾ. ಸಂದೀಪ, ಮಾಜಿ ಶಾಸಕ ಜಗದೀಶ‌ ಮೆಟಗುಡ್ಡ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ