ಆ್ಯಪ್ನಗರ

ಸೇವೆ ಕಾಯಂಗೊಳಿಸಿ: ಮುನ್ಸಿಪಲ್‌ ಕಾರ್ಮಿಕರ ಆಗ್ರಹ

ಬೆಳಗಾವಿ : ಗುತ್ತಿಗೆ ಪೌರಕಾರ್ಮಿಕರ ಸೇವೆ ಕಾಯಂಗೊಳಿಸುವಂತೆ ಒತ್ತಾಯಿಸಿ ಗುರುವಾರ ಕರ್ನಾಟಕ ಮುನ್ಸಿಪಲ್‌ ಕಾರ್ಮಿಕರ ಸಂಘದ ಕಾರ್ಯಕರ್ತರು ಪ್ರತಿಭಟನೆ ...

Vijaya Karnataka 14 Dec 2018, 5:00 am
ಬೆಳಗಾವಿ : ಗುತ್ತಿಗೆ ಪೌರಕಾರ್ಮಿಕರ ಸೇವೆ ಕಾಯಂಗೊಳಿಸುವಂತೆ ಒತ್ತಾಯಿಸಿ ಗುರುವಾರ ಕರ್ನಾಟಕ ಮುನ್ಸಿಪಲ್‌ ಕಾರ್ಮಿಕರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Vijaya Karnataka Web BEL-13 LBS 3


ನಗರ ಸ್ಥಳೀಯ ಸಂಸ್ಥೆಗಳಾದ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆಗಳಲ್ಲಿ ಕಳೆದ ಹತ್ತಾರು ವರ್ಷಗಳಿಂದ ಪೌರ ಕಾರ್ಮಿಕರು, ಲೋಡರ್‌ಗಳು, ವಾಟರ್‌ಮ್ಯಾನ್‌, ಕಸ ಸಂಗ್ರಹ, ಕಂಪ್ಯೂಟರ್‌ ಆಪರೇಟರ್‌, ಸಹಾಯಕರು ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಗುತ್ತಿಗೆ ಪೌರಕಾರ್ಮಿಕರು ಮಧ್ಯವರ್ತಿಗಳ ಶೋಷಣೆಯಿಂದ ನರಳುತ್ತಿದ್ದಾರೆ ಎಂದು ಪೌರಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು.

ಪೌರಕಾರ್ಮಿಕರನ್ನು ಮಧ್ಯವರ್ತಿಗಳ ಶೋಷಣೆಯಿಂದ ತಪ್ಪಿಸಿ ನೇರವಾಗಿ ಸ್ಥಳೀಯ ಸಂಸ್ಥೆಗಳಿಂದ ಕಾರ್ಮಿಕರಿಗೆ ವೇತನ ಪಾವತಿಗೆ ಕ್ರಮಕೈಗೊಳ್ಳಬೇಕು. ಗುತ್ತಿಗೆ ಪೌರಕಾರ್ಮಿಕರನ್ನು ಕೆಲಸದಿಂದ ತೆಗದು ಹಾಕುವುದನ್ನು ನಿಲ್ಲಿಸಬೇಕು. ಪ್ರತಿ ತಿಂಗಳು 10ರೊಳಗಾಗಿ ವೇತನ ಪಾವತಿಗೆ ಕ್ರಮಕೈಗೊಳ್ಳಬೇಕು ಎಂದು ಮನವಿ ಮೂಲಕ ಒತ್ತಾಯಿಸಿದರು.

ಸಿ.ವೆಂಕಟೇಶ್‌, ಸೈಯದ್‌ ಮುಜೀಬ, ಬಸವರಾಜ ಕಾಂಬಳೆ, ಸುಖದೇವ ಶಿಂಧೆ, ವಿಠ್ಠಲ ತಳವಾರ, ಮೀರಾಸಾಬ ಹುಕ್ಕೇರಿ, ರಫೀಕ್‌ ಇನಾಮದಾರ ಮೊದಲಾದವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ