ಆ್ಯಪ್ನಗರ

ಕಾಂಗ್ರೆಸ್‌ ಶಾಸಕರಿಂದ ಬಿಜೆಪಿ ಹೆಸರು ದುರುಪಯೋಗ

ಚಿಕ್ಕೋಡಿ: ಕಾಂಗ್ರೆಸ್‌ ಪಕ್ಷ ದವರು ತಮ್ಮ ಆಂತರಿಕ ಭಿನ್ನಾಭಿಪ್ರಾಯದಿಂದ ...

Vijaya Karnataka 30 Sep 2018, 5:00 am
ಚಿಕ್ಕೋಡಿ: ಕಾಂಗ್ರೆಸ್‌ ಪಕ್ಷ ದವರು ತಮ್ಮ ಆಂತರಿಕ ಭಿನ್ನಾಭಿಪ್ರಾಯದಿಂದ ಕಚ್ಚಾಡುತ್ತಿದ್ದು, ಸರಕಾರದ ಪತನ ಸನ್ನಿಹಿತವಾಗಿದೆ. ಆದ್ದರಿಂದ ಅನವಶ್ಯಕ ಬಿಜೆಪಿ ಹೆಸರು ದುರುಪಯೋಗ ಪಡಿಸಿಕೊಳ್ಳುವ ಕೆಲಸವನ್ನು ಕಾಂಗ್ರೆಸ್‌ನ ಕೆಲವು ಶಾಸಕರು ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ, ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಶಶಿಕಾಂತ ನಾಯಿಕ ಆರೋಪಿಸಿದರು.
Vijaya Karnataka Web name of bjp misused by congress mlas
ಕಾಂಗ್ರೆಸ್‌ ಶಾಸಕರಿಂದ ಬಿಜೆಪಿ ಹೆಸರು ದುರುಪಯೋಗ


ಪಟ್ಟಣದಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಯಾವ ನಾಯಕರೂ ಆಪರೇಶನ್‌ ಕಮಲ ಮಾಡುತ್ತಿಲ್ಲ. ಕಾಂಗ್ರೆಸ್‌ ಪಕ್ಷ ದಲ್ಲಿರುವ ಸಚಿವರಾಗಲಿ, ಶಾಸಕರಾಗಲಿ ಬಿಜೆಪಿಗೆ ಬಂದರೆ ತಾವು ಅವರನ್ನು ಸ್ವಾಗತಿಸುವುದಾಗಿ ಹೇಳಿದರು.

ಬೆಳಗಾವಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಬಿಜೆಪಿಯ ಯಾವ ನಾಯಕರು 30 ಕೋಟಿ ರೂ. ಮತ್ತು ಸಚಿವ ಸ್ಥಾನ ಕೊಡುವ ಆಮಿಷ ತೋರಿಸಿದ್ದಾರೆ ಎಂಬುದನ್ನು ಬಹಿರಂಗ ಪಡಿಸಬೇಕು. ಅದನ್ನು ಬಿಟ್ಟು ಕಾಂಗ್ರೆಸ್‌ ಪಕ್ಷ ದ ನಾಯಕರಲ್ಲಿ ಈಗ 'ಎತ್ತು ಎರೆಗೆ ಕೋಣ ಕೆರೆಗೆ' ಎಂಬಂತಹ ಪರಿಸ್ಥಿತಿ ಉಂಟಾಗಿದ್ದು, ಕಾಂಗ್ರೆಸ್‌ನಲ್ಲಿರುವ ಅತೃಪ್ತರು ಬಿಜೆಪಿಯ ಹೆಗಲ ಮೇಲೆ ಬಂದೂಕು ಇಟ್ಟು ಗುಂಡು ಹೊಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.

ಮುಖ್ಯಮಂತ್ರಿ ಕುಮಾರಸ್ವಾಮಿಯವರ ಕಾಲೆಳೆಯುವ ಕೆಲಸ ಕಾಂಗ್ರೆಸ್‌ನವರಿಂದ ನಡೆದಿದ್ದು, ಈಗಲಾದರೂ ಕಾಂಗ್ರೆಸ್‌ ನಾಯಕರು ತಮ್ಮಲ್ಲಿರುವ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ರೈತರ ಸಾಲಮನ್ನಾ ಸೇರಿದಂತೆ ಜನರಿಗೆ ಮೂಲಭೂತ ಸೌಕರ್ಯ ಕೊಡುವ ಕೆಲಸಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ