ಆ್ಯಪ್ನಗರ

ರೈತರಿಂದ ರಾಷ್ಟ್ರೀಯ ಹೆದ್ದಾರಿ ತಡೆ

ಬೆಳಗಾವಿ : ಭೂಸ್ವಾಧೀನ ಕಾಯ್ದೆ ಯನ್ನು ರಾಜ್ಯ ಸರಕಾರ ತಿದ್ದುಪಡಿ ಮಾಡಿದ್ದನ್ನು ವಿರೋಧಿಸಿ ಸೋಮವಾರ ಕರ್ನಾಟಕ ರಾಜ್ಯ ...

Vijaya Karnataka 11 Jun 2019, 5:00 am
ಬೆಳಗಾವಿ : ಭೂಸ್ವಾಧೀನ ಕಾಯ್ದೆ ಯನ್ನು ರಾಜ್ಯ ಸರಕಾರ ತಿದ್ದುಪಡಿ ಮಾಡಿದ್ದನ್ನು ವಿರೋಧಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಸುವರ್ಣ ವಿಧಾನಸೌಧ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಈ ವೇಳೆ ಕೆಲ ಹೊತ್ತು ರಸ್ತೆ ಸಂಚಾರ ಸ್ಥಗಿತಗೊಂಡಿತು. ಬಳಿಕ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡು ಸಂಚಾರಕ್ಕೆ ಅನುವು ಮಾಡಿಕೊಟ್ಟರು.
Vijaya Karnataka Web BEL-10 LBS 10


2013ರ ಭೂಸ್ವಾಧೀನ ಕಾಯ್ದೆಯನ್ನು ರಾಜ್ಯ ಸರಕಾರ 2019ರಲ್ಲಿ ತಿದ್ದುಪಡಿ ಮಾಡಿದ್ದು, ಇದು ರೈತರ ಪಾಲಿಗೆ ಮರಣ ಶಾಸನವಾಗಿದೆ. ರಾಜ್ಯ ಸರಕಾರದ ಈ ನಿರ್ಧಾರದಿಂದ ರೈತರಿಗೆ ಸಾಕಷ್ಟು ತೊಂದರೆಯಾಗುತ್ತದೆ. ರೈತ ಪರವಾದ ಸರಕಾರ ಎಂದು ಹೇಳುವ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕೂಡಲೇ ಭೂಸ್ವಾಧೀನ ಕಾಯ್ದೆಯನ್ನು ಹಿಂಪಡೆದುಕೊಳ್ಳಬೇಕು. ಇಲ್ಲದಿದ್ದರೆ ನಿರಂತರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮದರ, ಜಿಲ್ಲಾಧ್ಯಕ್ಷ ಸತ್ಯಪ್ಪ ಮಲ್ಲಾಪುರೆ, ಯಲ್ಲಪ್ಪ್ಪ ದೊಡಮನಿ, ಗುರು ಸೋಮಣ್ಣನವರ ಮೊದಲಾದವರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ