ಆ್ಯಪ್ನಗರ

ಜ.22ರಂದು ಬೆನಾಡಿಯಲ್ಲಿ ನಿಪ್ಪಾಣಿ ತಾಲೂಕು ಸಾಹಿತ್ಯ ಸಮ್ಮೇಳನ

ನಿಪ್ಪಾಣಿ : ತಾಲೂಕಿನ ಬೆನಾಡಿಯ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ...

Vijaya Karnataka 17 Jan 2019, 5:00 am
ನಿಪ್ಪಾಣಿ : ತಾಲೂಕಿನ ಬೆನಾಡಿಯ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಜ.22 ರಂದು ಪ್ರಥಮ ಬಾರಿಗೆ ನಿಪ್ಪಾಣಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷೆ ವಿದ್ಯಾವತಿ ಜನವಾಡೆ ತಿಳಿಸಿದರು.
Vijaya Karnataka Web BEL-16 LBS 7


ಬೆನಾಡಿಯ ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆಯವರ ಅಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಯಲಿದೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಬಿ.ಎಸ್‌.ಮಾಲಗಾರ ಅವರನ್ನು ಆಯ್ಕೆ ಮಾಡಲಾಗಿದೆ. ಈಗಾಗಲೇ ಎರಡು ಬಾರಿ ಗ್ರಾಮದಲ್ಲಿ ಪೂರ್ವಸಿದ್ಧತೆ ಸಭೆ ನಡೆಸಲಾಗಿದೆ. ಗ್ರಾಮಸ್ಥರು ಸಮ್ಮೇಳನಕ್ಕೆ ಸಾಕಷ್ಟು ಬೆಂಬಲ ನೀಡುತ್ತಿದ್ದಾರೆ ಎಂದರು.

ಕಸಾಪನ ತಾಲೂಕು ಘಟಕದ ಗೌರವಾಧ್ಯಕ್ಷ ಚಂದ್ರಕಾಂತ ಕೋಠಿವಾಲೆ ಮಾತನಾಡಿ, ಬೆನಾಡಿ ಗ್ರಾಮದಲ್ಲಿ ನಡೆಯುತ್ತಿರುವ ಸಮ್ಮೇಳನಕ್ಕೆ ಬೆನಾಡಿಯ ಕನ್ನಡಿಗರು ಶ್ರಮಿಸಬೇಕು. ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರು ಇದ್ದಾರೆ. ಸಮ್ಮೇಳನದ ಸಿದ್ಧತೆಗೆ ಗ್ರಾಮದ ಎಲ್ಲರೂ ತೊಡಗಬೇಕು ಎಂದರು.

ಕಾಡಸಿದ್ಧೇಶ್ವರ ಪ್ರೌಢಶಾಲೆಯ ಮುಖ್ಯಾಧ್ಯಾಪಕ ರಾಮು ಜೋಡಟ್ಟಿ ಮಾತನಾಡಿದರು. ಇದೇ ವೇಳೆ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯ ಸಂಚಾಲಕ ಪಪ್ಪು ಪಾಟೀಲ, ಅವಿನಾಶ ಪಾಟೀಲ, ಅನಿಲ ನೇಷ್ಠಿ, ಕಲ್ಲಪ್ಪ ಜನವಾಡೆ, ಸದಾಶಿವ ಜನವಾಡೆ, ವೀರಣ್ಣ ಗಿರಿಮಲ್ಲನ್ನವರ, ಪಿಡಿಒ ಆರ್‌.ಬಿ.ವಾಳಕೆ, ಮುಖ್ಯಾಧ್ಯಾಪಕ ಎಂ.ಟಿ. ಅಭಯಂಕರ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ