ಆ್ಯಪ್ನಗರ

ಅಭಿವೃದ್ಧಿ ವಿಷಯದಲ್ಲಿತಾರತಮ್ಯ ಸಲ್ಲದು

ಬೆಳಗಾವಿ: ಕ್ಷೇತ್ರದ ಅಭಿವೃದ್ಧಿ ...

Vijaya Karnataka 25 Feb 2020, 5:00 am
ಬೆಳಗಾವಿ: ಕ್ಷೇತ್ರದ ಅಭಿವೃದ್ಧಿ ವಿಷಯದಲ್ಲಿಅಧಿಕಾರಿಗಳು ಪಕ್ಷಾತೀತವಾಗಿ ಕಾರ್ಯನಿರ್ವಹಿಸಬೇಕು. ತಾರತಮ್ಯ ಮಾಡಿದರೆ ಸಹಿಸಲಾಗದು ಎಂದು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು.
Vijaya Karnataka Web 24BGM5080820
ಕಾಕತಿ, ಕಡೋಲಿ ಜಿಪಂ ವ್ಯಾಪ್ತಿಯ ಅಭಿವೃದ್ಧಿ ವಿಷಯಗಳ ಕುರಿತ ಪ್ರಗತಿ ಪರಿಶೀಲನೆ ಸಭೆಯಲ್ಲಿಪಾಲ್ಗೊಂಡಿರುವ ಶಾಸಕ ಸತೀಶ ಜಾರಕಿಹೊಳಿ ಮತ್ತಿತರರು.


ಸೋಮವಾರ ನಗರದ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಸಭಾಂಗಭಣದಲ್ಲಿಏರ್ಪಡಿಸಿದ್ದ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಕಾಕತಿ, ಕಡೋಲಿ ಜಿಲ್ಲಾಪಂಚಾಯಿತಿ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಗತಿ ಪರಿಶೀಲನೆ ಸಭೆಯಲ್ಲಿಅವರು ಮಾತನಾಡಿದರು. ''ಕೆಲ ಅಧಿಕಾರಿಗಳು ಮತ್ತು ಸಿಬ್ಬಂದಿ ನಿರ್ಲಕ್ಷ್ಯತನದಿಂದ ಕೆಲಸ ಮಾಡುತ್ತಿದ್ದಾರೆ. ಕುಡಿಯುವ ನೀರಿನ ಕೊರತೆ ಇಲ್ಲದಿದ್ದರೂ ನೀರು ಬಿಡುವ ಸಿಬ್ಬಂದಿ ಸಕಾಲಕ್ಕೆ ನೀರು ಪೂರೈಸದೆ ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ಇಂತಹ ವರ್ತನೆ ಸಹಿಸಲಾಗದು. ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಮೇಲ್ವಿಚಾರಣೆ ನಡೆಸಬೇಕು'' ಎಂದು ಸೂಚಿಸಿದರು.

''ಪ್ರವಾಹ ಸಂದರ್ಭದಲ್ಲಿಹಾನಿಗೀಡಾದ ಮನೆಗಳ ಸಮೀಕ್ಷೆ ಕೂಡ ಸರಿಯಾಗಿ ನಡೆಸಿಲ್ಲ. ಉತ್ತಮವಾಗಿರುವ ಮನೆಗಳನ್ನೂ ಪರಿಹಾರ ಪಟ್ಟಿಗೆ ಸೇರಿಸಿರುವುದು ಕಂಡು ಬಂದಿದ್ದು, ಈಗಾಗಲೇ ಸಂಗ್ರಹಿಸಿದ ಸಮೀಕ್ಷೆ ಪಟ್ಟಿ ಕೈಬಿಟ್ಟು ಅರ್ಹತೆ ಆಧಾರದ ಮೇಲೆ ಪಟ್ಟಿ ಸಿದ್ಧಪಡಿಸಬೇಕು. ಶಿಥಿಲಗೊಂಡಿರುವ ಶಾಲಾ ಕಟ್ಟಡಗಳ ದುರಸ್ತಿ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸಬೇಕು'' ಎಂದು ಶಾಸಕ ಸತೀಶ್‌ ಆದೇಶಿಸಿದರು.

ಜಿಪಂ ಉಪಾಧ್ಯಕ್ಷ ಅರುಣ ಕಟಾಂಬಳೆ, ಕಾಕತಿ ತಾಪಂ ಸದಸ್ಯ ಯಲ್ಲಪ್ಪ ಕೋಳೇಕರ್‌ ಹಾಗೂ ಗ್ರಾಪಂ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ