ಆ್ಯಪ್ನಗರ

ಡ್ಯಾಂ ನೀರು ‘ಕೃಷ್ಣೆ’ಗೆ ಹರಿಸಲು ವಿರೋಧ

ಬೆಳಗಾವಿ: ಹಿಡಕಲ್‌ ಡ್ಯಾಂನಿಂದ ಕೃಷ್ಣಾ ನದಿಗೆ ನೀರು ಹರಿಸುವ ...

Vijaya Karnataka 21 May 2019, 5:00 am
ಬೆಳಗಾವಿ : ಹಿಡಕಲ್‌ ಡ್ಯಾಂನಿಂದ ಕೃಷ್ಣಾ ನದಿಗೆ ನೀರು ಹರಿಸುವ ಆದೇಶವನ್ನು ರಾಜ್ಯ ಸರಕಾರ ಹಿಂಪಡೆದುಕೊಳ್ಳಬೇಕು ಎಂದು ಒತ್ತಾಯಿಸಿ ಸೋಮವಾರ ಅರಬಾವಿ ಕ್ಷೇತ್ರದ ಬಿಜೆಪಿ ಘಟಕ, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಗೋಕಾಕ, ಮೂಡಲಗಿ ತಾಲೂಕಿನ ರೈತರು ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಡಾ. ಆರ್‌. ವಿಶಾಲ್‌ ಅವರಿಗೆ ಮನವಿ ಸಲ್ಲಿಸಿದರು.
Vijaya Karnataka Web BEL-20 LBS 3


ನಗರದ ಚನ್ನಮ್ಮ ವೃತ್ತದಲ್ಲಿ ಕೆಲಹೊತ್ತು ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟಿಸಿದರು.

ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಅವರು ಹಿಡಕಲ್‌ ಡ್ಯಾಂನಿಂದ ಕೃಷ್ಣಾ ನದಿಗೆ 1 ಟಿಎಂಸಿ ನೀರು ಹರಿಸುವಂತೆ ಆದೇಶ ಮಾಡಿದ್ದಾರೆ. ಇದರಿಂದ ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಎದುರಾಗಲಿದೆ. ಡ್ಯಾಂನಲ್ಲಿ ಕೇವಲ 4 ಟಿಎಂಸಿ ನೀರು ಮಾತ್ರ ಉಳಿದುಕೊಂಡಿದೆ. ಆ ನೀರು ಇಲ್ಲಿನ ಜನರಿಗೆ ಸಾಲುವುದಿಲ್ಲ. ಹೀಗಿರುವಾಗ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡುವಂತೆ ಆದೇಶ ಮಾಡಿದ್ದೇಕೆ? ಎಂದು ಪ್ರಶ್ನಿಸಿದ ಪ್ರತಿಭಟನೆಕಾರರು ಎಂದು ಡಿ.ಕೆ. ಶಿವಕುಮಾರ ವಿರುದ್ಧ ಘೋಷಣೆ ಕೂಗಿದರು.

ಉಗ್ರ ಹೋರಾಟದ ಎಚ್ಚರಿಕೆ: ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಬರಗಾಲವಿದೆ. ಜನ-ಜಾನುವಾರುಗಳಿಗೆ ಕುಡಿಯಲು ನೀರಿಲ್ಲ. ಆದ್ದರಿಂದ ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆ ಮೂಲಕ ಕೂಡಲೇ ನೀರು ಹರಿಸಬೇಕು. ರಾಜ್ಯ ಸರಕಾರದ ಕೃಷ್ಣಾ ನದಿಗೆ ಹಿಡಕಲ್‌ ಡ್ಯಾಂನಿಂದ ನೀರು ಹರಿಸುವ ತೀರ್ಮಾನವನ್ನು ತಕ್ಷಣ ಕೈಬಿಡಬೇಕು. ಡ್ಯಾಂನಲ್ಲಿರುವ ನೀರನ್ನು ಗೋಕಾಕ ಮತ್ತು ಮೂಡಲಗಿ ತಾಲೂಕಿನ ಗ್ರಾಮಗಳಿಗೆ ಕಾಲುವೆ ಮೂಲಕ ಹರಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಮನವಿ ಮೂಲಕ ಎಚ್ಚರಿಸಿದರು.

ಜಿಪಂ ಸದಸ್ಯ ಗೋವಿಂದ ಕೊಪ್ಪದ, ರೈತ ಮುಖಂಡ ಗಣಪತಿ ಈಳಿಗೇರ, ಬಸವಂತ ಕಮತಿ, ಅಶೋಕ ಖಂಡ್ರಟ್ಟಿ, ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಸುಭಾಷ ಪಾಟೀಲ, ವಿಠ್ಠಲ ಪಾಟೀಲ, ರೈತ ಮುಖಂಡ ಚೂನಪ್ಪ ಪೂಜಾರಿ, ಭೀಮಶಿ ಗಡಾದಿ, ಮಹಾದೇವ ತಾಂಬಡೆ, ಲಕ್ಷ ್ಮಣ ನೀಲನ್ನವರ, ಸಿದ್ದಪ್ಪ ಹಮ್ಮನವರ, ರಾಮಯ್ಯ ಮಠದ, ಮಹಾದೇವ ತುಕ್ಕಾನಟ್ಟಿ, ಸುಭಾಷ ಹಾವಾಡಿ ಇತರರು ಉಪಸ್ಥಿತರಿದ್ದರು.

ಡಿಸಿ ಕಚೇರಿಗೆ ಮುತ್ತಿಗೆ ಯತ್ನ :
ಚನ್ನಮ್ಮ ವೃತ್ತದಿಂದ ಬೃಹತ್‌ ಪ್ರತಿಭಟನೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಡಿಸಿ ಕಚೇರಿ ಆವರಣದಲ್ಲಿ ಹಾಕಲಾಗಿರುವ ಬ್ಯಾರಿಕೇಡ್‌ಗಳನ್ನು ಕೆಡವಿದರು. ಪ್ರತಿಭಟನೆಕಾರರನ್ನು ತಡೆಯಲು ಪೊಲೀಸರು ಹರಸಾಹಸ ಪಟ್ಟರು. ಈ ವೇಳೆ ನೂಕುನುಗ್ಗಲು ಉಂಟಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ