ಆ್ಯಪ್ನಗರ

ಬೆಳಗಾವಿ ಜಿಲ್ಲಾ ವಿಭಜನೆಗೆ ವಿರೋಧ

ಬೆಳಗಾವಿ ಜಿಲ್ಲಾ ವಿಭಜನೆ ನಿರ್ಧಾರ ಕೈಗೊಳ್ಳಬಾರದು ಎಂದು ಜಿಲ್ಲಾ ಕನ್ನಡಪರ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ

Vijaya Karnataka 15 Sep 2018, 5:00 am
ಬೆಳಗಾವಿ: ಬೆಳಗಾವಿ ಜಿಲ್ಲಾ ವಿಭಜನೆ ನಿರ್ಧಾರ ಕೈಗೊಳ್ಳಬಾರದು ಎಂದು ಜಿಲ್ಲಾ ಕನ್ನಡಪರ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಒತ್ತಾಯಿಸಿದ್ದಾರೆ.
Vijaya Karnataka Web BEL-14 LBS 2


ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಮಾಜಿ ಮೇಯರ್‌ ಸಿದ್ಧನಗೌಡಾ ಪಾಟೀಲ ಹಾಗೂ ಕನ್ನಡ ಪರ ಹೋರಾಟಗಾರ ಅಶೋಕ ಚಂದರಗಿ, ''ಜಿಲ್ಲಾ ವಿಭಜನೆಯಿಂದ ಬೆಳಗಾವಿಯಲ್ಲಿ ಮರಾಠಿಗರ ಪ್ರಭಾವ ಹೆಚ್ಚಾಗುತ್ತದೆ. ಭಾಷಾ ಸಮಸ್ಯೆ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ವಿಭಜನೆಗೆ ಮುನ್ನ ಆಯಾ ತಾಲೂಕು ಜನರ ಅಭಿಪ್ರಾಯ ಸಂಗ್ರಹಿಸಬೇಕು'', ಎಂದು ಅಭಿಪ್ರಾಯಪಟ್ಟರು.

''ಗಡಿ ಸಮಸ್ಯೆ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವಾಗ ರಾಜ್ಯ ಸರಕಾರ ಜಿಲ್ಲಾ ವಿಭಜನೆ ಕೈಗೊಳ್ಳಬಾರದು. ಕೋರ್ಟ್‌ ತೀರ್ಪು ಬರುವವರೆಗೆ ಕಾಯುವುದು ಒಳ್ಳೆಯದು. ರಾಜಕೀಯ ಲಾಭ-ನಷ್ಟ ಉದ್ದೇಶವಿಟ್ಟುಕೊಂಡು ಜಿಲ್ಲಾ ವಿಭಜನೆ ಸರಿಯಲ್ಲ. ಒಂದು ವೇಳೆ ಸರಕಾರ ವಿಭಜನೆಗೆ ಮುಂದಾದರೆ ಕನ್ನಡ ಸಂಘಟನೆಗಳು ಹೋರಾಟ ನಡೆಸುವುದು ಅನಿವಾರ್ಯ'', ಎಂದು ಎಚ್ಚರಿಸಿದರು.

ಜಿಲ್ಲಾ ವಿಭಜನೆಗೆ ಬೈಲಹೊಂಗಲ, ರಾಮದುರ್ಗ, ಗೋಕಾಕ ಭಾಗದ ಜನರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಬೆಳಗಾವಿ ವಿಭಜನೆ ಮಾಡಿದರೆ ಖಾನಾಪುರ, ಹುಕ್ಕೇರಿ ಮಾತ್ರ ಉಳಿಯುತ್ತದೆ. ಹಾಗಾಗಿ, ಸುಪ್ರೀಂ ಕೋರ್ಟ್‌ ಆದೇಶ ಬರುವವರೆಗೂ ವಿಭಜನೆ ಬೇಡ ಎಂದರು.

ಕರವೇ ಜಿಲ್ಲಾಧ್ಯಕ್ಷ ಮಹಾದೇವ ತಳವಾರ, ಯುವ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ, ಕರ್ನಾಟಕದ ನವ ನಿರ್ಮಾಣ ಸೇನೆ ಜಿಲ್ಲಾಧ್ಯಕ್ಷ ಬಾಬು ಸಂಗೋಡಿ, ಗಣೇಶ ರೋಖಡೆ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ