ಆ್ಯಪ್ನಗರ

ಸಂಸತ್‌ ಚುನಾವಣೆ: ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ

ಕೊಲ್ಲಾಪುರದಲ್ಲಿ ನಡೆದ ಪೊಲೀಸ್‌ ಅಧಿಕಾರಿಗಳ ಸಭೆಯಲ್ಲಿ ಚರ್ಚೆ - ಪರಸ್ಪರ ಸಹಕಾರದಿಂದ ಕಾರ್ಯ ನಿರ್ವಹಣೆಗೆ ಸಲಹೆ

Vijaya Karnataka 20 Mar 2019, 5:00 am
ಬೆಳಗಾವಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಹಾಗೂ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಕೊಲ್ಲಾಪುರದಲ್ಲಿ ಮಂಗಳವಾರ ನಡೆದ ಗಡಿ ಜಿಲ್ಲೆಗಳ ಪೊಲೀಸ್‌ ಅಧಿಕಾರಿಗಳ ಸಭೆ ನಿರ್ಣಯಿಸಿದೆ.
Vijaya Karnataka Web BLG-1903-2-52-19 POLICE MARCHING


ನೀತಿ ಸಂಹಿತೆ ಉಲ್ಲಂಘನೆ ಸೇರಿದಂತೆ ಚುನಾವಣೆ ನಿಯಮ ಉಲ್ಲಂಘನೆಗಳ ಮೇಲೆ ನಿಗಾ ಇಡಲು ಪರಸ್ಪರ ಜಿಲ್ಲೆಗಳ ಸಹಕಾರ ಬೇಕು. ಗಡಿ ಭಾಗದಲ್ಲಿ ಎರಡೂ ಭಾಗದ ಅಧಿಕಾರಿಗಳು ಎಚ್ಚರಿಕೆ ವಹಿಸುವುದರ ಜತೆಗೆ ಪರಸ್ಪರ ಮುನ್ನೆಚ್ಚರಿಕೆ ಮಾಹಿತಿ ವಿನಿಯಮ ಮಾಡಿಕೊಂಡರೆ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಣೆ ಮಾಡಬಹುದು ಎಂದು ಸಭೆಯಲ್ಲಿ ಚರ್ಚಿಸಲಾಯಿತು.

ಕೊಲ್ಲಾಪುರ, ಸೊಲ್ಲಾಪುರ, ಸಾಂಗ್ಲಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಬೆಳಗಾವಿ ಉತ್ತರ ವಲಯ ಐಜಿಪಿ ಎಚ್‌.ಜಿ.ಆರ್‌.ಸುಹಾಸ್‌, ನಗರ ಪೊಲೀಸ್‌ ಆಯುಕ್ತ ಬಿ.ಎಸ್‌.ಲೋಕೇಶಕುಮಾರ, ಬೆಳಗಾವಿ ಎಸ್ಪಿ ಸುಧೀರಕುಮಾರ ರೆಡ್ಡಿ ಸೇರಿದಂತೆ ವಿಜಯಪುರ ಜಿಲ್ಲಾ ಪೊಲೀಸ್‌ ವರಿಷ್ಠರು ಸಭೆಯಲ್ಲಿ ಉಪಸ್ಥಿತರಿದ್ದರು.

ಪೊಲೀಸ್‌, ಯೋಧರಿಂದ ಪಥ ಸಂಚಲನ

ಲೋಕಸಭಾ ಚುನಾವಣೆಯಲ್ಲಿ ಪಾರದರ್ಶಕ ಹಾಗೂ ನಿರ್ಭೀತ ಮತ ಚಲಾವಣೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ ಮಂಗಳವಾರ ಪೊಲೀಸ್‌ ಪಥಸಂಚಲನ ನಡೆಯಿತು. ಡಿಸಿಪಿ ಸೀಮಾ ಲಾಟ್ಕರ್‌ ನೇತೃತ್ವದಲ್ಲಿ ನಗರದ ಪಿಂಪಲಕಟ್ಟಾದಿಂದ ಆರಂಭವಾದ ಪೊಲೀಸ್‌ ಮತ್ತು ಬಿಎಸ್‌ಎಫ್‌ ಯೋಧರಿಂದ ಕೂಡಿದ ಪಥ ಸಂಚಲನ ಬಡಕಲ್‌ ಗಲ್ಲಿ, ಖಡಕ್‌ ಗಲ್ಲಿ, ಖಂಜರ್‌ ಗಲ್ಲಿ, ಘೀ ಗಲ್ಲಿ, ಚವಾಟ ಗಲ್ಲಿ, ಶೆಟ್ಟಿ ಗಲ್ಲಿ, ಚಾಂದೂ ಗಲ್ಲಿ ಸೇರಿದಂತೆ ಮಾರ್ಕೆಟ್‌ ಠಾಣೆಯ ವ್ಯಾಪ್ತಿಯಲ್ಲಿ ಸಂಚರಿಸಿತು. ಮತದಾರರು ಆಸೆ ,ಆಮಿಷಗಳಿಗೆ ಒಳಗಾಗದೆ ಮತದಾನ ಮಾಡಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಮುಂದೆ ಬರಬೇಕು ಎಂದು ಪಥ ಸಂಚಲನ ಮೂಲಕ ಸಂದೇಶ ಸಾರಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ