ಆ್ಯಪ್ನಗರ

ಗ್ರಾಮಗಳಲ್ಲಿ ಮೂಲಸೌಕರ್ಯ ಕೊರತೆಯಾಗದಂತೆ ಗಮನ ಹರಿಸಿ

ಹುಕ್ಕೇರಿ: ಪ್ರತಿ ಗ್ರಾಮಗಳಲ್ಲಿ ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯ ಹಾಗೂ ಘನತ್ಯಾಜ್ಯ ನಿರ್ವಹಣೆಯ ಕುರಿತು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಗಮನ ...

Vijaya Karnataka 12 Jun 2019, 5:00 am
ಹುಕ್ಕೇರಿ : ಪ್ರತಿ ಗ್ರಾಮಗಳಲ್ಲಿ ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯ ಹಾಗೂ ಘನತ್ಯಾಜ್ಯ ನಿರ್ವಹಣೆಯ ಕುರಿತು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಗಮನ ಹರಿಸಬೇಕೆಂದು ತಾಪಂ ವ್ಯವಸ್ಥಾಪಕ ಆರ್‌.ಎ. ಚಟ್ನಿ ಸೂಚಿಸಿದರು.
Vijaya Karnataka Web BEL-11 HUKKERI 03


ಅವರು ತಾಲೂಕು ಪಂಚಾಯಿತಿ ಆವರಣದಲ್ಲಿ ನಾನಾ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ 'ಸ್ವಚ್ಛಮೇವ ಜಯತೇ' ಕಾರ್ಯಕ್ರಮದಲ್ಲಿ ಸಸಿಗೆ ನೀರೆರೆದು ಪಿಡಿಒಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು.

ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಗ್ರಾಮದಲ್ಲಿರುವ ಪ್ರತಿಯೊಂದು ಬಡಾವಣೆಯಲ್ಲಿ ಸಂಚರಿಸಿ ಜನರ ಮೂಲ ಸೌಕರ್ಯಗಳ ಸಮಸ್ಯೆಗಳಿಗೆ ಕೊರತೆಯಾಗದಂತೆ ನೋಡಿಕೊಳ್ಳುವುದರ ಜತೆಗೆ ಅರಣ್ಯ ಇಲಾಖೆಯವರ ಸಹಕಾರದಿಂದ ಪ್ರತಿಯೊಬ್ಬರು ತಮ್ಮ ಮನೆಯ ಮುಂದೆ ಒಂದು ಗಿಡ ನೆಡುವಂತೆ ಜಾಗೃತಿ ಮೂಡಬೇಕೆಂದು ಎಂದು ಹೇಳಿದರು.

ತಾಪಂ ಅಧಿಕಾರಿಗಳಾದ ಎಸ್‌ಎಸ್‌ದುರ್ಗಾಯಿ, ಮಂಜುಳಾ ಜಿಮನ್ನವರ, ಬಿ.ಎ. ನಾಯಿಕವಾಡಿ, ದ್ವಾರಕಾ ಕಾಂಬೋಜಿ, ನಾಗಲಿಂಗ ಮಾಳಗಿ, ರಿಯಾಜ್‌ ಮುಲ್ತಾನಿ, ಐ.ಎನ್‌. ಪಾಟೀಲ, ಲಕ್ಷ್ಮಿ ಯಡ್ರಾಂವಿ, ಶಂಕರ ಶಿರಗುಪ್ಪಿ, ಮಹಾಂತೇಶ ಬಾದವಾನಮಠ, ಮೊದಲಾದವರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ