ಆ್ಯಪ್ನಗರ

ಬೈಲೂರು ಮಠಕ್ಕೆ ಪೊಲೀಸ್‌ ಅಧಿಕಾರಿಗಳ ಭೇಟಿ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ನಿಷ್ಕಲ ...

Vijaya Karnataka 29 May 2020, 5:00 am
ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ನಿಷ್ಕಲ ಮಂಟಪದ ಶ್ರೀ ನಿಜಗುಣಾನಂದ ಸ್ವಾಮೀಜಿ ಅವರಿಗೆ ಜೀವ ಬೆದರಿಕೆ ಪತ್ರಗಳು ಹಾಗೂ ದೂರವಾಣಿ ಕರೆಗಳು ಬಂದ ಹಿನ್ನೆಲೆಯಲ್ಲಿಮಠಕ್ಕೆ ಬೈಲಹೊಂಗಲ ಡಿವೈಎಸ್‌ಪಿ ಪ್ರದೀಪ ಗುಂಟೆ ಹಾಗೂ ಕಿತ್ತೂರು ಸಿಪಿಐ ಶ್ರೀಕಾಂತ ತೋಟಗಿ ಭೇಟಿ ನೀಡಿದರು.
Vijaya Karnataka Web 28KTR3 _53
ನಿಜಗುಣಾನಂದ ಶ್ರೀಗಳಿಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೊಲೀಸ್‌ ಅಧಿಕಾರಿಗಳಿಗೆ ಬೈಲೂರು ಗ್ರಾಮಸ್ಥರು ಮನವಿ ಸಲ್ಲಿಸಿದರು.


ಈ ವೇಳೆ ಡಿವೈಎಸ್‌ಪಿ ಪ್ರದೀಪ ಗುಂಟೆ ಮಾತನಾಡಿ, ಶ್ರೀಗಳಿಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿಯನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಮಠದ ಸುತ್ತಮುತ್ತ ಸಂಚರಿಸುವ ಸಂಶಯಾಸ್ಪದ ವ್ಯಕ್ತಿಗಳ ಮೇಲೆ ನಿಗಾ ಇರಿಸಿ ಮಾಹಿತಿ ಸಲ್ಲಿಸಲು ಸ್ಥಳೀಯರಿಗೆ ಮತ್ತು ಪೊಲೀಸ್‌ ಸಿಬ್ಬಂದಿಗೆ ಆದೇಶ ನೀಡಿದರು.

ಉಮೇಶ ಗೌರಿ, ಆನಂದ ಜಕಾತಿ, ರಾಜಶೇಖರ ಡೋಣಿ, ಸಂತೋಷ ಸಂಬಣ್ಣವರ ಹಾಗೂ ಬೈಲೂರು ಗ್ರಾಮಸ್ಥರು ಉಪಸ್ಥಿತರಿದ್ದರು. ಜೀವ ಬೆದರಿಕೆ ಹಾಕಿದ ಅನಾಮಧೇಯ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಶ್ರೀಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಇದೇ ವೇಳೆ ಪೊಲೀಸ್‌ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ