ಆ್ಯಪ್ನಗರ

ಬ್ಯಾಂಕ್‌ ವಿಲೀನಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ಬೆಳಗಾವಿ : ಬ್ಯಾಂಕ್‌ಗಳನ್ನು ವಿಲೀನಗೊಳಿಸುವಂತೆ ಆಗ್ರಹಿಸಿ ಶನಿವಾರ ಅಖಿಲ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ನೌಕರರ ಒಕ್ಕೂಟದ ಸದಸ್ಯರು ನಗರದ ಜಿಲ್ಲಾಧಿಕಾರಿ ಕಚೇರಿ ...

Vijaya Karnataka 24 Feb 2019, 5:00 am
ಬೆಳಗಾವಿ : ಬ್ಯಾಂಕ್‌ಗಳನ್ನು ವಿಲೀನಗೊಳಿಸುವಂತೆ ಆಗ್ರಹಿಸಿ ಶನಿವಾರ ಅಖಿಲ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ನೌಕರರ ಒಕ್ಕೂಟದ ಸದಸ್ಯರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಡಿಸಿ ಮೂಲಕ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಗೆ ಮನವಿ ರವಾನಿಸಿದರು.
Vijaya Karnataka Web BEL-23 LBS 4


ಇದೇ ವೇಳೆ ಪ್ರತಿಭಟನಾಕಾರರು ಮಾತನಾಡಿ, ಈಗಾಗಲೇ ಅನೇಕ ರಾಷ್ಟ್ರೀಕೃತ ಬ್ಯಾಂಕ್‌ಗಳನ್ನು ವಿಲೀನ ಮಾಡಲಾಗಿದೆ. ಅದೇ ಮಾದರಿ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್‌, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ ಹಾಗೂ ಕಾವೇರಿ ಗ್ರಾಮೀಣ ಬ್ಯಾಂಕ್‌ ವಿಲೀನ ಮಾಡಬೇಕು. ಇದರಿಂದ ಗ್ರಾಮೀಣ ಜನರಿಗೆ ಹೆಚ್ಚಿನ ಅನುಕೂಲವಾಗುತ್ತದೆ ಮತ್ತು ಸರಕಾರಗಳ ವಿವಿಧ ಯೋಜನೆಗಳನ್ನು ಗ್ರಾಮೀಣ ಜನರಿಗೆ ತಲುಪಿಸಲು ಸಹಕಾರಿಯಾಗುತ್ತದೆ ಎಂದರು.

ಈ ಮೂರೂ ಬ್ಯಾಂಕ್‌ಗಳಲ್ಲಿ ರಾಜ್ಯದ 2.50 ಕೋಟಿ ಜನರು ವ್ಯವಹರಿಸುತ್ತಾರೆ. ಪ್ರತಿವರ್ಷ 69 ಸಾವಿರ ಕೋಟಿ ರೂ. ವ್ಯವಹಾರ ನಡೆಯುತ್ತದೆ. ಬ್ಯಾಂಕ್‌ ವಿಲೀನ ಮಾಡುವುದರಿಂದ ಗ್ರಾಮೀಣ ಜನರಿಗೆ ಬ್ಯಾಂಕ್‌ನಿಂದ ಹೆಚ್ಚಿನ ಸೇವೆ ಸಿಗಲಿದೆ. ಸರಕಾರ ಕೂಡಲೇ ಬ್ಯಾಂಕ್‌ಗಳ ವಿಲೀನಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಕೆ.ವಿ. ಪಾಟೀಲ, ಎನ್‌.ಎಸ್‌. ನಾಯಕ, ಎ.ಎಚ್‌. ಕುಲಕರ್ಣಿ, ಬಿ.ವಿ. ದೊಡವಾಡ, ಅನಿಲ ಕೆ.ಜಿ. ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ