ಆ್ಯಪ್ನಗರ

ಬೆಳೆ ಹಾನಿ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ

ಬೆಳಗಾವಿ: ಪ್ರವಾಹದಿಂದ ಸಂಭವಿಸಿದ ಬೆಳೆ ಹಾನಿಗೆ ಸೂಕ್ತ ಪರಿಹಾರ ...

Vijaya Karnataka 3 Dec 2019, 5:00 am
ಬೆಳಗಾವಿ: ಪ್ರವಾಹದಿಂದ ಸಂಭವಿಸಿದ ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಸೋಮವಾರ ಬೆಳಗಾವಿ ರೈತ ಸಂಘಟನೆ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
Vijaya Karnataka Web 2LBS2_53
ಪ್ರವಾಹದಲ್ಲಿಸಂಭವಿಸಿದ ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ರೈತ ಸಂಘಟನೆ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.


ಕಳೆದ ನಾಲ್ಕೈದು ವರ್ಷಗಳಿಂದ ಸತತ ಬರಗಾಲದಿಂದ ಸರಿಯಾದ ಫಸಲು ಬಂದಿಲ್ಲ. ಈ ವರ್ಷ ಅತಿಯಾದ ಮಳೆಯಿಂದ ಪ್ರವಾಹ ಸಂಭವಿಸಿದ್ದರಿಂದ ಬೆಳೆ ಹಾಗೂ ಜಮೀನಿನ ಮಣ್ಣು ಕೊಚ್ಚಿಕೊಂಡು ಹೋಗಿದೆ. ಭೂಮಿ ಸರಿಪಡಿಸಲು ಸಾವಿರಾರು ರೂಪಾಯಿ ಖರ್ಚು ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಸರಕಾರ ಪ್ರತಿ ಎಕರೆ ಜಮೀನಿಗೆ 50 ಸಾವಿರ ರೂ. ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದರು.

ಸಂಘಟನೆ ಅಧ್ಯಕ್ಷ ನಾರಾಯಣ ಸಾವಂತ, ಎಸ್‌.ಎಸ್‌. ಪೂಜಾರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ