ಆ್ಯಪ್ನಗರ

ಪಿಂಚಣಿ ಹೆಚ್ಚಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಬೆಳಗಾವಿ : ಪಿಂಚಣಿ ಹೆಚ್ಚಳ ಮಾಡುವಂತೆ ಶುಕ್ರವಾರ ಕಾರ್ಮಿಕ ಪಿಂಚಣಿ ಯೋಜನೆ ಪಿಂಚಣಿದಾರರ ಕ್ಷೇಮಾಭಿವೃದ್ಧಿ ಮಹಾಮಂಡಳದ ನೇತೃತ್ವದಲ್ಲಿ ಪಿಂಚಣಿದಾರರು ...

Vijaya Karnataka 26 Jan 2019, 5:00 am
ಬೆಳಗಾವಿ : ಪಿಂಚಣಿ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಶುಕ್ರವಾರ ಕಾರ್ಮಿಕ ಪಿಂಚಣಿ ಯೋಜನೆ ಪಿಂಚಣಿದಾರರ ಕ್ಷೇಮಾಭಿವೃದ್ಧಿ ಮಹಾಮಂಡಳದ ನೇತೃತ್ವದಲ್ಲಿ ಪಿಂಚಣಿದಾರರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
Vijaya Karnataka Web BEL-25 LBS 6


ಸದ್ಯ ನೀಡುತ್ತಿರುವ ಮಾಸಿಕ ಪಿಂಚಣಿಯಲ್ಲಿ ಜೀವನ ಸಾಗಿಸಲು ಕಷ್ಟವಾಗುತ್ತಿದೆ. ಹಾಗಾಗಿ ಜೀವನ ನಿರ್ವಹಣೆಗೆ ಪ್ರತಿ ತಿಂಗಳು ಕನಿಷ್ಠ 9 ಸಾವಿರ ರೂಪಾಯಿ ಪಿಂಚಣಿ ಬೇಕಾಗುತ್ತದೆ. ಈ ಕುರಿತು ಹಲವು ಬಾರಿ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ, ಕೇಂದ್ರ ಸರಕಾರಕ್ಕೆ ಕ್ರಮಕ್ಕೆ ಮುಂದಾಗುತ್ತಿಲ್ಲ. ಮಾನವೀಯತೆ ದೃಷ್ಟಿಯಿಂದ ಪಿಂಚಣಿ ಹೆಚ್ಚಳ ಮಾಡಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮಹಾಮಂಡಳದ ಕಾರ್ಯದರ್ಶಿ ಎಸ್‌.ಎಸ್‌. ಮಹಾಜನ, ಎ.ಎನ್‌. ದೇಶಪಾಂಡೆ, ಪಿ.ಆರ್‌. ಪಾಟೀಲ, ಎಸ್‌.ಎ. ಹಿರೇಮಠ, ಬಿ.ಎಲ್‌. ಮಂಟೂರ ಮತ್ತಿರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ