ಆ್ಯಪ್ನಗರ

ರಾಜ್ಯ ಹೆದ್ದಾರಿ ಬಂದ್‌ ಮಾಡಿ ಪ್ರತಿಭಟನೆ

ಅಥಣಿ: ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತ ಸಂಘದಿಂದ ಸೋಮವಾರ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜೇವರ್ಗಿ- ಸಂಕೇಶ್ವರ ರಾಜ್ಯ ಹೆದ್ದಾರಿ ...

Vijaya Karnataka 11 Jun 2019, 5:00 am
ಅಥಣಿ : ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತ ಸಂಘದಿಂದ ಸೋಮವಾರ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜೇವರ್ಗಿ- ಸಂಕೇಶ್ವರ ರಾಜ್ಯ ಹೆದ್ದಾರಿ ಬಂದ್‌ ಮಾಡಿ ಪ್ರತಿಭಟಿಸಲಾಯಿತು.
Vijaya Karnataka Web BEL-10 ATHANI-02


ಸೋಮವಾರ ಬೆಳಗ್ಗೆ 10ರಿಂದ ಸುಮಾರು 3 ಗಂಟೆಗಳ ಕಾಲ ರಸ್ತೆತಡೆ ನಡೆಸಲಾಯಿತು. ಅಥಣಿಗೆ ಶಾಶ್ವತ ನೀರಾವರಿ ಯೋಜನೆಯಾಗಬೇಕು. ಭೂಸ್ವಾಧೀನ ಕಾಯ್ದೆ ರದ್ದು ಪಡಿಸಬೇಕು. ರೈತರಿಗೆ ಕಬ್ಬಿನ ಬಾಕಿ ಹಣ ಪಾವತಿಸಬೇಕು. ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು. ಬಸವೇಶ್ವರ ಏತ ನೀರಾವರಿ ಯೋಜನೆಯ ಕೆಲಸ ತೀವ್ರಗತಿಯಲ್ಲಿ ನಡೆಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ರೈತ ಸಂಘದ ತಾಲೂಕು ಅಧ್ಯಕ್ಷ ಮಹಾದೇವ ಮಡಿವಾಳ ಮಾತನಾಡಿ, ರೈತರ ಬೇಡಿಕೆ ಈಡೇರಿಸಲು ಸರಕಾರ ನಿರ್ಲಕ್ಷ ್ಯ ವಹಿಸಿದೆ ಎಂದು ಆರೋಪಿಸಿದರು. ನಂತರ ಶಾಸಕ ಮಹೇಶ ಕುಮಠಳ್ಳಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ರಸ್ತೆತಡೆ ನಿಲ್ಲಿಸುವಂತೆ ಮನವಿ ಮಾಡಿದ್ದರಿಂದ ರೈತರು ಪ್ರತಿಭಟನೆ ನಿಲ್ಲಿಸಿ, ಉಪತಹಸೀಲ್ದಾರ ರಾಜು ಬುರ್ಲಿ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ರಮೇಶ ಮಡಿವಾಳ, ಶಿವಲಿಂಗ ಹೀರೆಮಠ, ಪಿಂಟು ಕಬಾಡಗಿ, ಮೋದಿನ ಮೋಳೆ, ಪಾರೀಶ ಯಳಗೊಡ, ಅಡಿವೆಪ್ಪ ಆಜೂರ, ಚನ್ನಗೌಡ ಇಮ್ಮಗೌಡ ಮತ್ತಿತರರು ಭಾಗಿಯಾಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ