ಆ್ಯಪ್ನಗರ

ನಾಳೆ ಕಬ್ಬಿನ ಬಿಲ್‌ ಪಾವತಿಗೆ ಆಗ್ರಹಿಸಿ ಪ್ರತಿಭಟನೆ

ಕಬ್ಬಿನ ಬಿಲ್‌ ಬಾಕಿ ಉಳಿಸಿಕೊಂಡಿರುವ ಎಮ್‌ಕೆ...

Vijaya Karnataka 10 Sep 2018, 5:00 am
ಚನ್ನಮ್ಮನ ಕಿತ್ತೂರು: ಕಬ್ಬಿನ ಬಿಲ್‌ ಬಾಕಿ ಉಳಿಸಿಕೊಂಡಿರುವ ಎಮ್‌.ಕೆ. ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ, ಹಳ್ಯಾಲದ ಪ್ಯಾರಿ ಸಕ್ಕರೆ ಕಾರ್ಖಾನೆ ಹಾಗೂ ಸೋಮೇಶ್ವರ ಸಕ್ಕರೆ ಕಾರ್ಖಾನೆಗಳ ವಿರುದ್ಧ ಸೆ. 11ರಂದು ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು ಸೆ. 17ರೊಳಗಾಗಿ ರೈತರ ಸಮಸ್ಯೆ ಬಗೆ ಹರಿಸದಿದ್ದರೆ ಸೆ. 18ರಂದು ಬೆಂಗಳೂರಿನ ವಿಧಾನಸೌಧಕ್ಕೆ ಕಬ್ಬು ಬೆಳೆಗಾರರೆಲ್ಲ ಮುತ್ತಿಗೆ ಹಾಕುವುದಾಗಿ ಜಿಲ್ಲಾ ಕಬ್ಬು ಬೆಳೆಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರವೀಣ ಸರದಾರ ಹೇಳಿದ್ದಾರೆ.
Vijaya Karnataka Web protest tomorrow demanding sugarcane bill payment
ನಾಳೆ ಕಬ್ಬಿನ ಬಿಲ್‌ ಪಾವತಿಗೆ ಆಗ್ರಹಿಸಿ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿ ಪಕ್ಕದ ಚನ್ನಮ್ಮ ವೃತ್ತದಿಂದ 11ರಂದು ಹೊರಡುವ ರೈತರ ರಾರ‍ಯಲಿಯು ಪಟ್ಟಣದ ಮುಖ್ಯ ಬೀದಿಗುಂಟ ಸಾಗಿ ತಹಸೀಲ್ದಾರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು. ಈ ರಾರ‍ಯಲಿಯಲ್ಲಿ ಎಲ್ಲ ರೈತರು ಪಾಲ್ಗೊಳ್ಳಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು. ರಾಜ್ಯ ಕಬ್ಬು ಬೆಳೆಗಾರರ ಸಂಘದ ಉಪಾಧ್ಯಕ್ಷ ಬಾಬು ಉಪಾಸಿ, ಶಂಕರ ಸವದಿ, ವೀರಭದ್ರಯ್ಯಾ ಆಸಂಗಿಮಠ, ಅಬ್ದುಲ್‌ರಜಾಕ ಗಡಕರಿ, ಈರಣ್ಣಾ ಕಡೇಮನಿ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ