ಆ್ಯಪ್ನಗರ

ವೇತನ ನೀಡಲು ಆಗ್ರಹಿಸಿ ಪೌರಕಾರ್ಮಿಕರ ಪ್ರತಿಭಟನೆ

ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರ ಬಾಕಿ ಉಳಿದ ಎರಡು ತಿಂಗಳ ವೇತನ ನೀಡುವುದು ಮತ್ತು ಭತ್ಯೆ ಹೆಚ್ಚಿಸುವಂತೆ ಆಗ್ರಹಿಸಿ ಶುಕ್ರವಾರ ಮಹಾನಗರ ಪಾಲಿಕೆಯ ಪೌರಕಾರ್ಮಿಕರು ಜಿಲ್ಲಾಧಿಕಾರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

Vijaya Karnataka 8 Dec 2018, 5:00 am
ಬೆಳಗಾವಿ: ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರ ಬಾಕಿ ಉಳಿದ ಎರಡು ತಿಂಗಳ ವೇತನ ನೀಡುವುದು ಮತ್ತು ಭತ್ಯೆ ಹೆಚ್ಚಿಸುವಂತೆ ಆಗ್ರಹಿಸಿ ಶುಕ್ರವಾರ ಮಹಾನಗರ ಪಾಲಿಕೆಯ ಪೌರಕಾರ್ಮಿಕರು ಜಿಲ್ಲಾಧಿಕಾರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
Vijaya Karnataka Web BEL-7 LBS 5


ಪೌರಕಾರ್ಮಿಕರಿಗೆ ಎರಡು ತಿಂಗಳಿಂದ ವೇತನ ಹಾಗೂ ಭತ್ಯೆ ನೀಡಿಲ್ಲ. ಇದರಿಂದ ಜೀವನ ನಿರ್ವಹಣೆ ಕಷ್ಟವಾಗಿದೆ. ವೇತನ ನೀಡುವಂತೆ ಮೇಯರ್‌ ಹಾಗೂ ಆಯುಕ್ತರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳಲಾಗಿದೆ. ಆದರೆ, ಯಾವುದೇ ಕ್ರಮಕೈಗೊಂಡಿಲ್ಲ ಎಂದು ಮನವಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಳಗ್ಗಿನ ಉಪಾಹಾರಕ್ಕೆ ಪಾಲಿಕೆ ಪೌರಕಾರ್ಮಿಕರಿಗೆ 20 ರೂ. ಭತ್ಯೆ ನೀಡುತ್ತಿದೆ. ಹೋಟೆಲ್‌ಗಳಲ್ಲಿ 20 ರೂ.ಗಳಿಗೆ ಉಪಾಹಾರ ಸಿಗುತ್ತಿಲ್ಲ. ಆದ್ದರಿಂದ ಉಪಹಾರ ಭತ್ಯೆಯನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ವಿಠ್ಠಲ ತಳವಾರ, ವಿಕಾಶ ದಳವಾಯಿ, ಅಮೀತ ಲಾಕೆ, ವಿಕಾಶ ಲಾಕೆ, ಭಾಗ್ಯಲಕ್ಷ್ಮೀ, ಗೌರಿ ಜಮಾದಾರ, ಸರೋಜಿನಿ ಶಿವಗುರೆ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ