ಆ್ಯಪ್ನಗರ

ಪರಿಶಿಷ್ಟ ಸಮುದಾಯದ ಯೋಜನೆಗಳ ಖರ್ಚಿನ ಮಾಹಿತಿ ನೀಡಿ

ರಾಯಬಾಗ: ತಾಲೂಕು ಮಟ್ಟದ ಎಸ್‌ಸಿಪಿ, ಟಿಎಸ್‌ಪಿ ಮೇಲ್ವಿಚಾರಣಾ ಸಮಿತಿಯ ಮಾಸಿಕ ...

Vijaya Karnataka 31 Jul 2019, 5:00 am
ರಾಯಬಾಗ: ತಾಲೂಕು ಮಟ್ಟದ ಎಸ್‌ಸಿಪಿ, ಟಿಎಸ್‌ಪಿ ಮೇಲ್ವಿಚಾರಣಾ ಸಮಿತಿಯ ಮಾಸಿಕ ಆರ್ಥಿಕ ಹಾಗೂ ಭೌತಿಕ ಪ್ರಗತಿ ಪರಿಶೀಲನಾ ಸಭೆ ಪಟ್ಟಣದ ತಾಪಂ ಸಭಾ ಭವನದಲ್ಲಿ ಮಂಗಳವಾರ ನಡೆಯಿತು.
Vijaya Karnataka Web BEL-30RAIBAG1PHOTO


ಸಮಾಜ ಕಲ್ಯಾಣ ಅಧಿಕಾರಿ ಬಿ.ವೈ.ಕುರಿಹುಲಿ ಮಾತನಾಡಿ, ಎಸ್‌ಸಿಪಿ, ಟಿಎಸ್‌ಪಿ ಸಭೆಯನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾ ಮಟ್ಟದಲ್ಲಿ ನಡೆಸಲಾಗುತ್ತಿತ್ತು. ಸರಕಾರ ಈ ಸಭೆಯನ್ನು ತಾಲೂಕು ಮಟ್ಟದಲ್ಲಿ ತಿಂಗಳಿಗೊಮ್ಮೆ ಮಾಡುವಂತೆ ಆದೇಶ ಮಾಡಿರುವುದರಿಂದ ಪ್ರತಿ ತಿಂಗಳು ಸಭೆ ಕರೆದು ನಾನಾ ಇಲಾಖೆಯವರು ಪ.ಜಾತಿ ಹಾಗೂ ಪ.ಪಂಗಡಗಳ ಸಮುದಾಯಕ್ಕೆ ಮಂಜೂರಾದ ಅನುದಾನದಲ್ಲಿ ಎಷ್ಟು ಖರ್ಚು ಮಾಡಲಾಗಿದೆ ಎಂಬುದರ ಬಗ್ಗೆ ಸಮಾಜ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಬೇಕೆಂದು ಹೇಳಿದರು.

ಕುಡಚಿ ಪುರಸಭೆಯ ಮುಖ್ಯಾಧಿಕಾರಿ ಎಸ್‌.ಎ.ಮಹಾಜನ ಮಾತನಾಡಿ, 2019-20 ರಲ್ಲಿ ಪ.ಜಾ, ಪ.ಪಂ ಅಭಿವೃದ್ಧಿಗಾಗಿ 22 ಲಕ್ಷ ರೂ ಕ್ರಿಯಾ ಯೋಜನೆ ಮಾಡಲಾಗಿದೆ. ಅಲ್ಲದೆ ಪುರಸಭೆಯಿಂದ 4 ಲಕ್ಷ ರೂ. ಕಾಯ್ದಿರಿಸಲಾಗಿದೆ ಎಂದರು.

ಹಾರೂಗೇರಿ ಪುರಸಭೆಯ ಮುಖ್ಯಾಧಿಕಾರಿ ಹಣ್ಣಿಕೇರಿ ಮಾತನಾಡಿ, ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿಯಲ್ಲಿ 70 ಲಕ್ಷ ರೂ ಕ್ರಿಯಾ ಯೋಜನೆ ಮಾಡಲಾಗಿದೆ ಅದರಲ್ಲಿ 17.50 ಲಕ್ಷ ರೂ ಮಂಜೂರಾಗಿ ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು.

ರಾಯಬಾಗ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್‌.ಆರ್‌.ಮಾಂಗ ಮಾತನಾಡಿ, ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಪಟ್ಟಣದ ಅಂಬೇಡ್ಕರ ಭವನ ಹಾಗೂ ವೃತ್ತಕ್ಕೆ ಬಣ್ಣ ಹಚ್ಚುವ ಸಲುವಾಗಿ ಹಾಗೂ ಪಂಚಾಯಿತಿ ವ್ಯಾಪ್ತಿಯ ಪ.ಜಾತಿ ಹಾಗೂ ಪ.ಪಂಗಡಗಳ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟ್ಯಾಪ್‌ ನೀಡಲು ಹಣ ಮೀಸಲಿಡಲಾಗಿದೆ ಎಂದರು.

ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ ಆರ್‌.ಬಿ.ಮನವಡ್ಡರ ಮಾತನಾಡಿ, ರಾಯಬಾಗ ಹಾಗೂ ಕುಡಚಿ ಮತಕ್ಷೇತ್ರಗಳಿಗೆ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ರೂ. 7 ಕೋಟಿ 76ಲಕ್ಷ ಮಂಜೂರಾಗಿವೆ ಎಂದರು.

ತಾಪಂ ಸದಸ್ಯ ನಾಮದೇವ ಕಾಂಬಳೆ ಮಾತನಾಡಿ, ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿಯಲ್ಲಿ ಸರಕಾರದಿಂದ ಮಂಜೂರಾದ ಅನುದಾನವನ್ನು ಅಧಿಕಾರಿಗಳು ಸರಿಯಾಗಿ ಸದ್ಬಳಕೆ ಮಾಡಿ ಗುಣಮಟ್ಟದ ಕಾಮಗಾರಿಗಳನ್ನು ಮಾಡಬೇಕೆಂದರು.

ಸಭೆಯಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸುದೀಪ ಚೌಗಲಾ, ಜಿಪಂ ಸದಸ್ಯೆ ಜಯಶ್ರೀ ಮೋಹಿತೆ, ಬಿಇಒ ಎಚ್‌.ಎ. ಭಜಂತ್ರಿ ಹಾಗೂ ತಾಲೂಕಿನ ಎಲ್ಲ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ