ಆ್ಯಪ್ನಗರ

ರಾಮದುರ್ಗ: ಭಾರತ ಬಂದ್‌ ಭಾಗಶಃ ಯಶಸ್ವಿ

ರಾಮದುರ್ಗ: ದೇಶದಲ್ಲಿ ರೈತರು, ಮಹಿಳೆಯರು, ಮಕ್ಕಳು, ಕಾರ್ಮಿಕರು ಶೋಚನೀಯ, ಅಭದ್ರತೆಯ ಪರಿಸ್ಥಿತಿಯಲ್ಲಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ಇದೆಲ್ಲ ತನಗೇನೂ ...

Vijaya Karnataka 9 Jan 2019, 5:00 am
ರಾಮದುರ್ಗ: ದೇಶದಲ್ಲಿ ರೈತರು, ಮಹಿಳೆಯರು, ಮಕ್ಕಳು, ಕಾರ್ಮಿಕರು ಶೋಚನೀಯ, ಅಭದ್ರತೆಯ ಪರಿಸ್ಥಿತಿಯಲ್ಲಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ಇದೆಲ್ಲ ತನಗೇನೂ ಸಂಬಂಧವಿಲ್ಲವೆಂಬಂತೆ ಜಾಣ ಕುರುಡು ಪ್ರದರ್ಶಿಸುತ್ತಿರುವುದು ಖೇದಕರ ಸಂಗತಿ ಎಂದು ಸಿಐಟಿಯು ಜಿಲ್ಲಾಧ್ಯಕ್ಷ ವಿ.ಪಿ. ಕುಲಕರ್ಣಿ ಹೇಳಿದರು.
Vijaya Karnataka Web BEL-08RD2A


ಅವರು ಪಟ್ಟಣದಲ್ಲಿ ಭಾರತ ಬಂದ್‌ ಕರೆ ಹಿನ್ನಲೆಯಲ್ಲಿ ಮಂಗಳವಾರ ಇಲ್ಲಿನ ನಾನಾ ಕಾರ್ಮಿಕ ಸಂಘಟನೆಗಳ ಸಾವಿರಾರು ಸದಸ್ಯರು ಪಟ್ಟಣದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿ ಮಿನಿ ವಿಧಾನಸೌಧದ ಆವರಣದಲ್ಲಿ ಸೇರಿದ ಬಹರಂಗ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಬೆಲೆ ಏರಿಕೆ ತಡೆಗಟ್ಟಬೇಕು, ಉದ್ಯೋಗ ಸೃಷ್ಟಿ ಮಾಡಬೇಕು, ಡಾ. ಸ್ವಾಮಿನಾಥನ್‌ ವರದಿಯಂತೆ ರೈತರ ಬೆಳೆಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕು, ಕಾಪೋರ್‍ರೇಟ್‌ ಕಂಪನಿಗಳ ಪರವಾಗಿರುವ ಕಾರ್ಮಿಕ ಕಾನೂನುಗಳನ್ನು ತಿದ್ದುಪಡೆ ಮಾಡಬೇಕು. ಗುತ್ತಿಗೆ ಕಾರ್ಮಿಕ ಪದ್ಧತಿ ನಿಷೇದ ಮಾಡಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ಅಂಗನವಾಡಿ, ಬಿಸಿಯೂಟ, ಆಶಾ ಮತ್ತಿತರ ಸ್ಕೀಮ್‌ ನೌಕರರನ್ನು ಖಾಯಂ ಮಾಡಬೇಕು, ಅಸಂಘಟಿತ ಕಾರ್ಮಿಕರಿಗೆ ಸಮಾಜಿಕ ಭದ್ರತೆ ನೀಡಬೇಕು, ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣ ಮಾಡಬಾರದು, ನಾನಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಕನಿಷ್ಟ 18 ಸಾವಿರ ರೂ. ವೇತನ ನಿಗದಿ ಮಾಡಬೇಕೆಂದು ಕೇಂದ್ರ ಸರಕಾರವನ್ನು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಗೈಬು ಜೈನೆಖಾನ್‌ ಮಾತನಾಡಿದರು. ನಾನಾ ಸಂಘಟನೆಗಳ ಕಾರ್ಮಿಕ ಮುಖಂಡರಾದ ನಾಗಪ್ಪ ಸಂಗೊಳ್ಳಿ, ಕೃಷ್ಣಾ ಹೊಸೂರ, ಸರಸ್ವತಿ ಮಾಳಶೆಟ್ಟಿ, ಮಾಲಾ ಈಳಗೇರ ಮಾತನಾಡಿದರು.

ಬೃಹತ್‌ ಪ್ರತಿಭಟನೆ:
ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಆರಂಭಗೊಂಡ ಭಾರತ ಬಂದ್‌ ರಾಮದುರ್ಗದಲ್ಲಿ ಭಾಗಶಃ ಯಶಸ್ವಿಯಾಯಿತು. ಇಲ್ಲಿನ ವೆಂಕಟೇಶ್ವರ ದೇವಸ್ಥಾನದಲ್ಲಿ ಸೇರಿದ ನಾನಾ ಸಂಘಟನೆಗಳ ಸಾವಿರಾರು ಕಾರ್ಮಿಕರು ಅಲ್ಲಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೇಂದ್ರ ಸರಕಾರ ವಿರುದ್ಧ ಘೋಷನೆಗಳನ್ನು ಕೂಗುತ್ತಾ ಮಿನಿ ವಿಧಾನಸೌಧದ ಎದುರು ಸಮಾವೇಶಗೊಂಡಿತು. ಸಭೆಯ ನಂತರ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಸಾರಿಗೆ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿತ್ತು. ಶಾಲಾ ಕಾಲೇಜು, ಬ್ಯಾಂಕುಗಳು, ಅಂಚೆ ಕಚೇರಿ ಬಂದ್‌ ಮಾಡಲಾಗಿತ್ತು. ವ್ಯಾಪಾರ ವಹಿವಾಟು ಎಂದಿನಂತೆ ಸಾಮಾನ್ಯವಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ