ಆ್ಯಪ್ನಗರ

ಸರ್ಕಾರದ ಸವಲತ್ತುಗಳನ್ನು ಜನರಿಗೆ ತಲುಪಿಸೋ ಪ್ರಾಮಾಣಿಕ ಕೆಲಸ ಮಾಡಿ, ಅಧಿಕಾರಿಗಳಿಗೆ ರಮೇಶ್ ಜಾರಕಿಹೊಳಿ ಸೂಚನೆ

ಸರ್ಕಾರ ಒದಗಿಸುವ ಸವಲತ್ತುಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನವನ್ನು ನಡೆಸಬೇಕು ಎಂದು ಸಚಿವ ರಮೇಶ್ ಜಾರಕಿಹೊಳಿ ಸೂಚಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಅಧಿಕಾರಿಗಳಿಗೆ ಖಡನ್ ಸೂಚನೆ ನೀಡಿದರು.

Vijaya Karnataka Web 6 Apr 2020, 3:53 pm
ಬೆಳಗಾವಿ: ಪಟ್ಟಣದ ಎಲ್ಲ ಗ್ರಾಮಗಳ ಜನರಿಗೆ ಸರ್ಕಾರ ಒದಗಿಸಿರುವಂತಹ ಸವಲತ್ತುಗಳು ಕೂಡಲೇ ಪೂರೈಕೆಯಾಗಬೇಕು. ಸಾರ್ವಜನಿಕರಿಗೆ ಅಗತ್ಯವಿರುವಂತ ವಸ್ತುಗಳನ್ನು ಒದಗಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು.
Vijaya Karnataka Web ramesh jarakoholi


ಬೆಳಗಾಗಿ ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ ಸೋಮವಾರ ನಡೆದ ಜಿಲ್ಲಾ ಪಂಚಾಯಿತಿ, ಪುರಸಭೆ ಸದಸ್ಯರು ಹಾಗೂ ಅಧಿಕಾರಿಗಳ ಕೊರೋನಾ ಜಾಗೃತಿ ಸಭೆ ಯಲ್ಲಿ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ‌ ಕೊರೊನಾ ಸೋಂಕು ನಿರ್ವಹಣೆ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಕೆಲವೊಂದು ಖಡಕ್ ಸೂಚನೆಗಳನ್ನು ನೀಡಿದರು.

ಬದುಕಿದ್ದಾಗ ಕೊರೊನಾ ನೆಗೆಟಿವ್, ಸತ್ತಾಗ ಪಾಸಿಟಿವ್: ಮೂಕ ವಿಸ್ಮಿತರಾದ ವೈದ್ಯರು!

ಮಹಾಮಾರಿ ಕೊರೊನಾ ಸೋಂಕು ಪ್ರಪಂಚದಲ್ಲಿ ವ್ಯಾಪಕವಾಗಿ ಹರಡಿದೆ. ಅದೇ ರೀತಿ ನಮ್ಮ ಭಾರತದಲ್ಲಿಯೂ ಹಬ್ಬಿದೆ. ಇದರಿಂದ ಜನರು ಸಹ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಲಾಕ್ ಡೌನ್ ಇರುವ ಹಿನ್ನೆಲೆ ಜನರಿಗೆ ಅಗತ್ಯ ವಸ್ತುಗಳ ತೊಂದರೆಯಾಗದಂತೆ ನೋಡಿಕೊಳ್ಳಬೇಕು.

ಜತೆಗೆ ಸರ್ಕಾರದ ಎಲ್ಲ ಸವಲತ್ತುಗಳನ್ನು ತಲುಪಿಸುವ ಕೆಲಸವನ್ನು ಕೂಡಲೇ ಮಾಡಬೇಕು ಎಂದರು. ಜನರಿಗೆ ಕೊರೊನಾ ಬಗ್ಗೆ ಭಯ ಬೇಡ. ಆದರೆ ಎಚ್ಚರಿಕೆಯಿಂದ ಇರಬೇಕು. ಸರ್ಕಾರದ ಲಾಕ್ ಡೌನ್ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಿದರು. ಇದೇ ವೇಳೆ ಆರೋಗ್ಯ ಇಲಾಖೆ ಅಧಿಕಾರಿಗಳು ಕೊರೊನಾ ಜಾಗೃತಿ ಮೂಡಿಸಿದರು.

ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಆರೋಗ್ಯ ಇಲಾಖೆ ಶಿಕ್ಷಣ ಇಲಾಖೆ, ಊರಿನ ಪ್ರಮುಖ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ