ಆ್ಯಪ್ನಗರ

ಅತ್ಯಾಚಾರ, ಗರ್ಭಪಾತ; ಮೂವರ ವಿರುದ್ಧ ದೂರು

ಬೆಳಗಾವಿ: ಬಾಲಕಿ ಮೇಲೆ ಅತ್ಯಾಚಾರ ಮತ್ತು ಗರ್ಭಪಾತ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಮಾಡಿದ ...

Vijaya Karnataka 25 Jun 2019, 5:00 am
ಬೆಳಗಾವಿ: ಬಾಲಕಿ ಮೇಲೆ ಅತ್ಯಾಚಾರ ಮತ್ತು ಗರ್ಭಪಾತ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಮಾಡಿದ ಆರೋಪಿ, ಬಾಲಕಿಯ ತಾಯಿ ಸೇರಿದಂತೆ ಮೂವರ ವಿರುದ್ಧ ಭಾನುವಾರ ಗೋಕಾಕ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Vijaya Karnataka Web rape abortion complaint against three
ಅತ್ಯಾಚಾರ, ಗರ್ಭಪಾತ; ಮೂವರ ವಿರುದ್ಧ ದೂರು


ಗೋಕಾಕ ತಾಲೂಕಿನ 14 ವರ್ಷದ ಬಾಲಕಿ ಮೇಲೆ ಅಡಿವೆಪ್ಪ ಲಕ್ಕಪ್ಪ ಪೂಜೇರಿ ಎಂಬಾತ ಅತ್ಯಾಚಾರ ನಡೆಸಿದ್ದರಿಂದ ಬಾಲಕಿ ಗರ್ಭ ಧರಿಸಿದ್ದಳು ಎನ್ನಲಾಗಿದೆ.

ಗರ್ಭ ಧರಿಸಿರುವ ಸಂಗತಿ ತಿಳಿಯುತ್ತಿದ್ದಂತೆ ಬಾಲಕಿಯ ತಾಯಿ ಅಡಿವೆಪ್ಪ ಪೂಜೇರಿ ಮತ್ತು ಆತನ ದೊಡ್ಡಪ್ಪ ರಂಗಪ್ಪ ಪೂಜೇರಿ ಸಹಾಯದಿಂದ ಗೋಕಾಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ಗರ್ಭಪಾತ ಮಾಡಿಸಿದ್ದರು.

ಈ ಎಲ್ಲ ಘಟನೆಯ ಮಾಹಿತಿ ಬಾಲಕಿಯ ತಂದೆ ಮತ್ತು ಸಂಬಂಧಿಕರಿಗೆ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಮಕ್ಕಳ ಸಹಾಯವಾಣಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಾಲಕಿಯನ್ನು ಜಿಲ್ಲಾಸ್ಪತ್ರೆ ದಾಖಲಿಸಿದ ಮಕ್ಕಳ ರಕ್ಷಣಾ ಘಟಕ ಮತ್ತು ಮಕ್ಕಳ ಸಹಾಯವಾಣಿ ಅಧಿಕಾರಿಗಳು, ಆರೋಪಿತರ ವಿರುದ್ಧ ಪೊಕ್ಸೋ ಮತ್ತು ಗರ್ಭಪಾತ ನಿರ್ಬಂಧಕ ಕಾನೂನು ಉಲ್ಲಂಘನೆ ಆರೋಪದಡಿ ದೂರು ದಾಖಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ