ಆ್ಯಪ್ನಗರ

ಅಪ್ರಾಪ್ತೆ ಅತ್ಯಾಚಾರ ಪ್ರಕರಣ; ಅಪರಾಧಿಗೆ 10 ವರ್ಷ ಶಿಕ್ಷೆ

ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಪೋಕ್ಸೋ ನ್ಯಾಯಾಲಯ ಅಪರಾಧಿಗೆ 10 ...

Vijaya Karnataka 20 Mar 2019, 5:00 am
ಬೆಳಗಾವಿ: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಪೋಕ್ಸೋ ನ್ಯಾಯಾಲಯ ಅಪರಾಧಿಗೆ 10 ವರ್ಷ ಕಾರಾಗೃಹ ಶಿಕ್ಷೆ ಮತ್ತು 28,500 ರೂ. ದಂಡ ವಿಧಿಸಿ ಮಂಗಳವಾರ ತೀರ್ಪು ಪ್ರಕಟಿಸಿದೆ. ಶಾಹು ನಗರದಲ್ಲಿ ವಾಸವಾಗಿರುವ ಅನಗೊಳದ ಪ್ರಸಾದ ಆನಂದ ಬಳ್ಳಾರಿ (34) ಶಿಕ್ಷೆಗೆ ಗುರಿಯಾದ ಅಪರಾಧಿ. 2014ರ ಏ.15 ರಂದು ಗೆಳತಿ ಮನೆಗೆ ಹೊರಟಿದ್ದ ಅಪ್ರಾಪ್ತೆಯನ್ನು ಅಪರಾಧಿ ಪ್ರಸಾದ ಬಳ್ಳಾರಿ ಅಪಹರಿಸಿ ಅತ್ಯಾಚಾರ ನಡೆಸಿ ಜೀವ ಬೆದರಿಕೆ ಕೂಡ ಹಾಕಿದ್ದ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಖಡೇಬಜಾರ್‌ ಠಾಣೆಯ ಪೊಲೀಸರು ತನಿಖೆ ಕೈಗೊಂಡು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಜಿ. ನಂಜುಡಯ್ಯ ತೀರ್ಪು ಪ್ರಕಟಿಸಿದ್ದಾರೆ. ಸರಕಾರಿ ಅಭಿಯೋಜಕ ಎಲ್‌.ವಿ.ಪಾಟೀಲ ಸಂತ್ರಸ್ತೆ ಪರವಾಗಿ ವಾದ ಮಂಡಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ