ಕಾಗವಾಡ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ವ್ಯಕ್ತಿಯೊಬ್ಬನನ್ನು ಸೋಮವಾರ ಕಾಗವಾಡ ಪೊಲೀಸರು ಬಂಧಿಸಿ ಬೆಳಗಾವಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಉಗಾರಖುರ್ದ ಗ್ರಾಮದ ಸಂತೋಷ ಪ್ರಕಾಶ ಧುಮಾಳೆ (28) ಬಂಧಿತ ಆರೋಪಿ. ಎರಡು ಮಕ್ಕಳ ತಂದೆಯಾಗಿರುವ ಆರೋಪಿಯು ಗ್ರಾಮದ ಪಿಯು ಕಾಲೇಜಿನಲ್ಲಿ ಓದುತ್ತಿರುವ 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಕಾಗವಾಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪಿಎಸ್ಐ ಹನುಮಂತ ಶಿರಹಟ್ಟಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.
ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ
ಕಾಗವಾಡ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೋಕ್ಸೋ ...
Vijaya Karnataka 23 Jul 2019, 5:00 am