ಆ್ಯಪ್ನಗರ

ಚಿಕ್ಕೋಡಿಯಿಂದ ಸ್ಪರ್ಧೆಗೆ ಸಿದ್ಧ: ಪ್ರಭಾಕರ ಕೋರೆ

ಬೆಳಗಾವಿ: ''ಲೋಕಸಭೆ ಚುನಾವಣೆಗೆ ಚಿಕ್ಕೋಡಿ ಕ್ಷೇತ್ರದಿಂದ ಟಿಕೆಟ್‌ ನೀಡುವಂತೆ ಪಕ್ಷದ ವರಿಷ್ಠರ ಬಳಿ ಕೇಳಿದ್ದೇನೆ...

Vijaya Karnataka 4 Feb 2019, 5:00 am
ಬೆಳಗಾವಿ: ''ಲೋಕಸಭೆ ಚುನಾವಣೆಗೆ ಚಿಕ್ಕೋಡಿ ಕ್ಷೇತ್ರದಿಂದ ಟಿಕೆಟ್‌ ನೀಡುವಂತೆ ಪಕ್ಷದ ವರಿಷ್ಠರ ಬಳಿ ಕೇಳಿದ್ದೇನೆ. ಟಿಕೆಟ್‌ ನೀಡಿದರೆ ಚಿಕ್ಕೋಡಿಯಿಂದ ಸ್ಪರ್ಧಿಸುತ್ತೇನೆ'' ಎಂದು ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಹೇಳಿದರು.
Vijaya Karnataka Web BEL-3 LBS 2


ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಟಿಕೆಟ್‌ ಯಾರಿಗೆ ನೀಡಬೇಕು ಎಂದು ಇನ್ನೂ ವರಿಷ್ಠರು ತೀರ್ಮಾನಿಸಿಲ್ಲ. ಒಂದು ವೇಳೆ ನನಗೆ ನೀಡಿದರೆ ಸ್ಪಧಿರ್ಧಿಸಲು ಸಿದ್ಧನಾಗಿದ್ದೇನೆ'' ಎಂದು ತಿಳಿಸಿದರು.

''ಸಂಸದ ಸುರೇಶ ಅಂಗಡಿ ಅವರೇ ಈ ಬಾರಿಯೂ ಬೆಳಗಾವಿ ಲೋಕಸಭೆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಕೇಂದ್ರ ಸರಕಾರದಿಂದ ಸಾಕಷ್ಟು ಅನುದಾನ ತಂದು ಬೆಳಗಾವಿ ಲೋಕಸಭೆ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಿದ್ದಾರೆ. ಆದ್ದರಿಂದ ಈ ಬಾರಿ ಸುರೇಶ ಅಂಗಡಿ ಅವರು ಗೆಲವು ಸಾಧಿಸಲಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಬಜೆಟ್‌ನಲ್ಲಿ ಸಾಕಷ್ಟು ಯೋಜನೆ ನೀಡಿದೆ. ಕರ್ನಾಟಕ ರಾಜ್ಯದ 28 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಗೆಲವು ಸಾಧಿಸಲಿದೆ. ಕಳೆದ ಐದು ವರ್ಷದಲ್ಲಿ ಕೇಂದ್ರ ಸರಕಾರ ಸಾಕಷ್ಟು ಉತ್ತಮ ಕೆಲಸ ಮಾಡಿದೆ. ಮತ್ತೊಮ್ಮೆ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರ ಬರಲಿದೆ'' ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

''ಕೇಂದ್ರ ಸರಕಾರದ ಬಜೆಟ್‌ ಕುರಿತು ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ತಮ್ಮ ಬಜೆಟ್‌ ಕಾಫಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಇಂತಹ ಹೇಳಿಕೆ ನೀಡುವಾಗ ನೋಡಿಕೊಂಡು ಮಾತನಾಡಬೇಕು. ಇಂತಹ ಹೇಳಿಕೆಗಳು ಸಿದ್ದರಾಮಯ್ಯ ಅವರಿಗೆ ಶೋಭೆ ತರುವುದಿಲ್ಲ'' ಎಂದು ಪ್ರಭಾಕರ ಕೋರೆ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ