ಆ್ಯಪ್ನಗರ

ಕೃಷ್ಣಾ ತೀರದ ಜನರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿ

ಬೆಳಗಾವಿ : ಜಿಲ್ಲೆಯಲ್ಲಿ ಮಳೆ ಸುರಿಯುತ್ತಿರುವುದು ಹಾಗೂ ...

Vijaya Karnataka 3 Aug 2019, 5:00 am
ಬೆಳಗಾವಿ : ಜಿಲ್ಲೆಯಲ್ಲಿ ಮಳೆ ಸುರಿಯುತ್ತಿರುವುದು ಹಾಗೂ ಮಹಾರಾಷ್ಟ್ರದ ಜಲಾಶಯಗಳಿಂದ ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುತ್ತಿರುವುದರಿಂದ ನದಿ ಸಮೀಪದ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು ಎಂದು ಜಿಲ್ಲಾಧಿಕಾರಿ ಎಸ್‌.ಬಿ.ಬೊಮ್ಮನಹಳ್ಳಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Vijaya Karnataka Web relocate the people of krishna river bank to safe places
ಕೃಷ್ಣಾ ತೀರದ ಜನರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿ


ಜಿಲ್ಲೆಯ ಎಲ್ಲ ತಾಲೂಕು, ಉಪವಿಭಾಗ ಮಟ್ಟದಲ್ಲಿ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲು ನಿಯಂತ್ರಣ ಕೊಠಡಿ ತೆರೆದು ಅಗತ್ಯ ಸಿಬ್ಬಂದಿ ನಿಯೋಜಿಸಬೇಕು. ಪೊಲೀಸ್‌ ಇಲಾಖೆ, ಅಗ್ನಿಶಾಮಕ ಸಿಬ್ಬಂದಿ, ರಾಜ್ಯ ವಿಪತ್ತು ಸ್ಪಂದನಾ ಪಡೆ, ಜಿಲ್ಲಾ ಗೃಹರಕ್ಷ ಕ ದಳದ, ಪಂಚಾಯತ್‌ ರಾಜ್ಯ ಎಂಜಿನಿಯರಿಂಗ್‌ ಹಾಗೂ ಲೋಕೋಪಯೋಗಿ ಇಲಾಖೆ ಅಭಿಯಂತರರು ಪ್ರವಾಹದ ಸಂದರ್ಭದಲ್ಲಿ ಜನರ ರಕ್ಷ ಣೆಗೆ ಬೇಕಾಗುವ ಅಗತ್ಯ ಬೋಟ್‌ಗಳು ಸೇರಿದಂತೆ ಇನ್ನಿತರ ರಕ್ಷ ಣಾ ಸಾಮಗ್ರಿಗಳು ಮತ್ತು ಸಿಬ್ಬಂದಿ ನಿಯೋಜನೆ ಮಾಡಬೇಕು.

ನದಿ ಪಕ್ಕದಲ್ಲಿ ಬರುವ ವಿದ್ಯುತ್‌ ಕಂಬಗಳನ್ನು ಬೇರೆ ಕಡೆ ಸ್ಥಳಾಂತರಿಸಲು ಅಥವಾ ಸುರಕ್ಷ ತೆ ದೃಷ್ಟಿಯಿಂದ ಬೇಕಾಗುವ ಅಗತ್ಯ ಕ್ರಮಗಳನ್ನು ಹೆಸ್ಕಾಂನವರು ಕೈಗೊಳ್ಳಬೇಕು. ಆರೋಗ್ಯ ಇಲಾಖೆಯಿಂದ ಪ್ರವಾಹ ಪೀಡಿತ ಸ್ಥಳಗಳಲ್ಲಿ ವೈದ್ಯರನ್ನು ನೇಮಿಸಿ ಸಿಬ್ಬಂದಿ ಹಾಗೂ ಔಷಧ ಸಂಗ್ರಹಿಸಬೇಕು. ಪ್ರವಾಹದ ಕುರಿತು ಸ್ಥಳೀಯರಿಗೆ ಅಗತ್ಯ ಮಾಹಿತಿ ಒದಗಿಸಬೇಕು. ಜೀವಹಾನಿಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ನಿಗಾವಹಿಸಬೇಕು. ಆಯಾ ತಹಸೀಲ್ದಾರರು ಕಾಲ ಕಾಲಕ್ಕೆ ಉಪವಿಭಾಗಾಧಿಕಾರಿಗಳಿಗೆ ವರದಿ ನೀಡುತ್ತಿರಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ