ಆ್ಯಪ್ನಗರ

ನಿವೇಶನಗಳನ್ನು ಸಕ್ರಮಗೊಳಿಸುವಂತೆ ಮನವಿ

ಮುನವಳ್ಳಿ: ಸಮೀಪದ ಶಿಂದೋಗಿ ಗ್ರಾಮದಲ್ಲಿ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸರ್ವೇ ನಂ...

Vijaya Karnataka 28 Oct 2018, 5:00 am
ಮುನವಳ್ಳಿ : ಸಮೀಪದ ಶಿಂದೋಗಿ ಗ್ರಾಮದಲ್ಲಿ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸರ್ವೇ ನಂ. 4 ಹಾಗೂ 8 ರಲ್ಲಿ ಸುಮಾರು 30 ವರ್ಷಗಳಿಂದ ವಾಸಿಸುತ್ತಿರುವ 500 ಕ್ಕೂ ಹೆಚ್ಚು ನಿವಾಸಿಗಳ ನಿವೇಶನಗಳನ್ನು ಸಕ್ರಮಗೊಳಿಸುವಂತೆ ಆಗ್ರಹಿಸಿ ಅಲ್ಲಿನ ನಿವಾಸಿಗಳು ಗ್ರಾಪಂ ಅಧ್ಯಕ್ಷ ಯಲ್ಲಪ್ಪ ಹಲಗಿ, ಉಪಾಧ್ಯಕ್ಷೆ ರೇಣವ್ವ ಲವಟೆಗೆ ಶನಿವಾರ ಮನವಿ ಸಲ್ಲಿಸಿದರು.
Vijaya Karnataka Web BEL-27 MNL 2


ಸದರಿ ಸರ್ವೆ ಸಂಖ್ಯೆ ನಿವಾಸಿಗಳಿಗೆ ಗ್ರಾಪಂ ವತಿಯಿಂದ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ. ರಸ್ತೆ, ನೀರು, ವಿದ್ಯುತ್‌ ಸಂಪರ್ಕ, ಸರಕಾರಿ ಶಾಲೆ, ಪ್ರಾಥಮಿಕ ಆರೋಗ್ಯ ಉಪಕೇಂದ್ರಗಳು ಈ ಪ್ರದೇಶದಲ್ಲಿವೆ. 30 ವರ್ಷಗಳ ಹಿಂದೆ ಸಾರ್ವಜನಿಕರಿಂದ ಹಣ ಪಡೆದು ಬಾಂಡ್‌ ಮಾಡಿಸಿಕೊಟ್ಟು ಮನೆ ಕಟ್ಟಲು ಅನುಮತಿ ನೀಡಿದ ಜಾಗದ ಮೂಲ ಮಾಲೀಕ ಖರೀದಿ ಪತ್ರ ಮಾಡಿಕೊಡುವುದಾಗಿ ಹೇಳಿದ್ದರು. ಕಾಲಾನಂತರದಲ್ಲಿ ಅವರು ಮೃತರಾಗಿದ್ದಾರೆ. ಆದರೆ ಈಗ ಅವರ ವಾರಸುದಾರರು ಈ ಜಾಗದಲ್ಲಿ ವಾಸವಾಗಿರುವ ನಮ್ಮನ್ನು ಒತ್ತಾಯಪೂರ್ವಕವಾಗಿ ತೆರವುಗೊಳಿಸಲು ಮುಂದಾಗಿದ್ದಾರೆ. ರಸ್ತೆ ಬಂದ್‌ ಮಾಡಿ ಇಲ್ಲಿನ ನಿವಾಸಿಗಳಿಗೆ ತೊಂದರೆ ನೀಡುತ್ತಿದ್ದಾರೆ. ಈ ಸಂಬಂಧ ಜನಪ್ರತಿನಿಧಿಗಳು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ನಿವಾಸಿಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಮನವಿಯಲ್ಲಿ ವಿನಂತಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ