ಆ್ಯಪ್ನಗರ

ಅಭಿವೃದ್ಧಿಗೆ 244 ಕೋಟಿ ರೂ. ಅನುದಾನ ಭರವಸೆ

ಅಭಿವೃದ್ಧಿಗೆ 244 ಕೋಟಿ ರೂ...

Vijaya Karnataka 12 Aug 2018, 5:00 am
ಬೆಳಗಾವಿ: ನಗರದ ಅಭಿವೃದ್ಧಿಗಾಗಿ ದೆಹಲಿಗೆ ತೆರಳಿದ್ದ ಶಾಸಕ ಅಭಯ ಪಾಟೀಲ ನೇತೃತ್ವದ ನಿಯೋಗ, ಕೇಂದ್ರ ಸರಕಾರದ ವಿವಿಧ ಇಲಾಖೆಯ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದು, ಇದಕ್ಕೆ ಸ್ಪಂದಿಸಿರುವ ಸಚಿವರು ನಗರದ ಅಭಿವೃದ್ಧಿಗೆ ಒಟ್ಟು 244 ಕೋಟಿ ರೂ. ಅನುದಾನ ಒದಗಿಸುವ ಭರವಸೆ ನೀಡಿದ್ದಾರೆ.
Vijaya Karnataka Web BEL-11 LBS 2


ಕೇಂದ್ರದ ಸಂಸ್ಕೃತಿ ಇಲಾಖೆಯಿಂದ ದೇಶದ ವಿವಿಧ ರಾಜ್ಯಗಳಲ್ಲಿ ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಉತ್ಸವ ಆಯೋಜಿಸಲಾಗುತ್ತದೆ. ಇದೇ ರೀತಿ ಬೆಳಗಾವಿ ನಗರದಲ್ಲಿ ಪ್ರತಿ ವರ್ಷ ಹತ್ತು ದಿನಗಳ ಕಾಲ ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಉತ್ಸವ ಆಯೋಜಿಸಬೇಕು. ದೇಶದ ಎಲ್ಲ ರಾಜ್ಯಗಳ ಜಾನಪದ ಕಲೆ, ಭಾಷೆ ಹಾಗೂ ಸಂಸ್ಕೃತಿ ಬಿಂಬಿಸುವ ಕಾರ್ಯಕ್ರಮಗಳನ್ನು ಉತ್ಸವದಲ್ಲಿ ಆಯೋಜಿಸಬೇಕೆಂದು ಶಾಸಕ ಅಭಯ ಪಾಟೀಲ ನೇತೃತ್ವದ ನಿಯೋಗ ಕೇಂದ್ರ ಸಂಸ್ಕೃತಿ ಸಚಿವ ಮಹೇಶ ಶರ್ಮಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಇದಕ್ಕೆ ಸ್ಪಂದಿಸಿದ ಸಚಿವರು ತಿಂಗಳಲ್ಲಿ ತೀರ್ಮಾನಿಸುವ ಭರವಸೆ ನೀಡಿದ್ದಾರೆ.

ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿದ ನಿಯೋಗ, ಮಳೆಯಿಂದಾಗಿ ಬೆಳಗಾವಿ ರಸ್ತೆಗಳು ಸಂಪೂರ್ಣ ಹಾಳಾಗಿವೆ. ಕೇಂದ್ರದ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ 70 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡಾಗ ಕೂಡಲೇ ಅನುದಾನ ಬಿಡುಗಡೆ ಮಾಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ.

ಕೇಂದ್ರದ ರಸಗೊಬ್ಬರ ಸಚಿವ ಅನಂತಕುಮಾರ ಅವರ ಕಚೇರಿಯಲ್ಲಿ ಕೇಂದ್ರದ ಮೂಲಭೂತ ಸೌಕರ್ಯ ಇಲಾಖೆ ಸಚಿವ ರಾಧಾಕೃಷ್ಣನ್‌ ಅವರನ್ನು ನಿಯೋಗದೊಂದಿಗೆ ಶಾಸಕ ಅಭಯ ಪಾಟೀಲ ಭೇಟಿ ಮಾಡಿ, ಬೆಳಗಾವಿ ದಕ್ಷಿಣ ಮತಕ್ಷೇತ್ರದ ಅಭಿವೃದ್ಧಿಗಾಗಿ 174 ಕೋಟಿ ರೂ. ಅನುದಾನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಸಚಿವರು ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.

ಸಂಸದ ಸುರೇಶ ಅಂಗಡಿ, ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ, ಶಾಸಕ ಅನಿಲ ಬೆನಕೆ ಹಾಗೂ ಉದ್ಯಮಿಗಳು ನಿಯೋಗದಲ್ಲಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ