ಬೆಳಗಾವಿ:ಕೊನೆಗೂ ಹಿಂದೂ (Hindu) ಪದದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarkiholi) ವಿಷಾದ ವ್ಯಕ್ತಪಡಿಸಿದ್ದು, ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾರೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಪತ್ರ ಬರೆದಿರುವ ಅವರು ಈ ಬಗ್ಗೆ ತಂಡ ರಚನೆ ಮಾಡಿ ತನಿಖೆ ಮಾಡಿಸಿ ಎಂದು ಹೇಳಿದ್ದಾರೆ. ನನ್ನ ಹೇಳಿಕೆಯನ್ನು ತಿರುಚುತ್ತಿರುವುದರಿಂದ ಸುಖಾಸುಮ್ಮನೆ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಬಾರದು ಎನ್ನುವ ಉದ್ದೇಶದೊಂದಿಗೆ ಹೇಳಿಕೆಯನ್ನು ಹಿಂಪಡೆಯುತ್ತೇನೆ. ಮತ್ತು ನನ್ನ ಹೇಳಿಕೆಯಿಂದ ಯಾರ ಮನಸಿಗಾದರೂ ನೋವಾಗಿದ್ದಲ್ಲಿ ವಿಷಾದಿಸುತ್ತೇನೆ ಎಂದಿರುವ ಸತೀಶ್ ಜಾರಕಿಹೊಳಿ, ಹಿಂದೂ ಪದದ ಬಗ್ಗೆ ನೀಡಿರುವ ಹೇಳಿಕೆ ವಿವಾದದ ಅಂಶಗಳನ್ನು ಹಾಗೂ ನೈಜ ಸ್ಥಿತಿ ವಿವರಿಸದೇ ಇಷ್ಟೊಂದು ಅವಾಂತರ ಸೃಷ್ಟಿಸಿದವರ ಮೇಲೆ ತನಿಖೆ ಮಾಡುವಂತೆ ಮನವಿ ಮಾಡಿದ್ದಾರೆ.
ಸಿಎಂಗೆ ಜಾರಕಿಹೊಳಿ ಬರೆದ ಪತ್ರದಲ್ಲಿ ಏನಿದೆ?
ನವೆಂಬರ್ 6, 2022 ರಂದು ನಿಪ್ಪಾಣಿಯಲ್ಲಿ ಜರುಗಿದ ಮಾನವ ಬಂಧುತ್ವ ವೇದಿಕೆ ಕರ್ನಾಟಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಈ ಕೆಳಕಂಡ ವಿಷಯಗಳನ್ನು ಪ್ರಸ್ತಾಪಿಸಿದ್ದೇನೆ ಎಂದಿರುವ ಅವರು, ಹಿಂದೂ ಶಬ್ದ ಪರ್ಷಿಯನ್ ಭಾಷೆಯಿಂದ ಬಂದಿದೆ. ಇದು ಭಾರತ ದೇಶಕ್ಕೆ ಹೇಗೆ ಬಂತು? ಹಲವಾರು ಲೇಖನಗಳಲ್ಲಿ ಹಿಂದೂ ಎಂಬ ಪದದ ಅರ್ಥ ಕಟ್ಟದಾಗಿದೆ ಎಂದು ಬರೆದಿರುತ್ತಾರೆ ಅಂತಾ ಹೇಳಿರುತ್ತೇನೆ ಮತ್ತು ಇದು ಸಾರ್ವಜನಿಕವಾಗಿ ಚರ್ಚೆ ಆಗಬೇಕಾಗಿರುವುದು ಬಹಳ ಅವಶ್ಯಕತೆ ಇದೆ ಎಂದು ಸಹ ಹೇಳಿರುತ್ತೇನೆ ಎಂದು ಬರೆದಿದ್ದಾರೆ.
ಇದನ್ನು ನಾನು ವಿಕಿಪಿಡಿಯಾ, ಪುಸ್ತಕಗಳು, ಶಬ್ದಕೋಶಗಳು ಮತ್ತು ಇತಿಹಾಸಕಾರರ ಬರಹಗಳ ಉಲ್ಲೇಖದ ಮೇಲೆ ಈ ನನ್ನ ಭಾಷಣ ಆಧಾರಿತವಾಗಿರುತ್ತದೆ. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೊರಟಿರುತ್ತಾರೆ. ಜೊತೆಗೆ ನನಗೆ ತೇಜೋವಧೆ ಹಾಗೂ ಹಾನಿವುಂಟು ಮಾಡುವ ವ್ಯವಸ್ಥಿತ ಪಿತೂರಿ ನಡೆದಿರುತ್ತದೆ. ಮೇಲಿನ ಎಲ್ಲ ಅಂಶಗಳನ್ನು ಪರಿಶೀಲಿಸಲು ಮತ್ತು ನೈಜ ಸ್ಥಿತಿಯನ್ನು ವಿವರಿಸದೇ ಈ ಅವಾಂತರ ಸೃಷ್ಟಿಸಿದವರ ಮೇಲೆ ತನಿಖೆ ಮಾಡುವಂತೆ ವಿನಂತಿಸಿಕೊಳ್ಳುತ್ತೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.
ಇನ್ನು, ಮತ್ತೊಮ್ಮೆ ತಮ್ಮಲ್ಲಿ ಕೇಳಿಕೊಳ್ಳುವದೇನೆಂದರೆ, ಈ ಕುರಿತು ತಕ್ಷಣ ತನಿಖಾ ಸಮಿತಿ ರಚಿಸಬೇಕು ಎಂದು ವಿನಂತಿಸಿಕೊಳ್ಳುತ್ತೇನೆ. ಹಾಗೂ ನಿಪ್ಪಾಣಿಯಲ್ಲಿ ಜರುಗಿದ ಮಾನವ ಬಂಧುತ್ವ ವೇದಿಕೆಯ ಮನೆ ಮನೆಗೆ ಬುದ್ಧ, ಬಸವ, ಅಂಬೇಡ್ಕರ, ಕಾರ್ಯಕ್ರಮದಲ್ಲಿ ನಾನು ಮಾತನಾಡಿದ ಆ ಒಂದು ಮಾತು ವಿವಾದಕ್ಕಿಡಾಗಿದೆ. ಅಲ್ಲದೇ ಅದನ್ನು ತಿರುಚಿ ಅಪಪ್ರಚಾರ ಗೊಳಿಸುತ್ತಿರುವುದರಿಂದ. ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಬಾರದು ಎಂಬ ಸದುದ್ದೇಶದಿಂದ ಅಂದು ನಾನು ಹೇಳಿದ ಆ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ ಮತ್ತು ಈ ಹೇಳಿಕೆಯಿಂದ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಲ್ಲಿ ವಿಷಾದಿಸುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸತೀಶ್ ಜಾರಕಿಹೊಳಿ ಪತ್ರ ಬರೆದಿದ್ದಾರೆ.