ಆ್ಯಪ್ನಗರ

ಉಕ ಅಭಿವೃದ್ಧಿಗೆ ಕ್ರಮ ಕೈಗೊಳ್ಳದಿದ್ದರೆ ಸುವರ್ಣಸೌಧದ ಎದುರು ಪ್ರತ್ಯೇಕ ರಾಜ್ಯ ಧ್ವಜಾರೋಹಣ

ಬೆಳಗಾವಿ : ಚಳಿಗಾಲದ ಅಧಿವೇಶನಕ್ಕೂ ಮೊದಲೇ ಉತ್ತರ ಕರ್ನಾಟಕದ ಸಮಗ್ರ ಅ

Vijaya Karnataka 5 Dec 2018, 5:00 am
ಬೆಳಗಾವಿ: ಚಳಿಗಾಲದ ಅಧಿವೇಶನಕ್ಕೂ ಮೊದಲೇ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಒತ್ತಾಯಿಸಿ ಡಿ. 10ರಿಂದ ಸುವರ್ಣ ವಿಧಾನಸೌಧದ ಎದುರು ಪ್ರತಿಭಟನೆ ಮತ್ತು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಧ್ವಜಾರೋಹಣ ಮಾಡಲಾಗುವುದು ಎಂದು ಉತ್ತರ ಕರ್ನಾಟಕ ಹೋರಾಟ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗೇಶ ಗೋಲಿಶೆಟ್ಟಿ ಎಚ್ಚರಿಸಿದ್ದಾರೆ.
Vijaya Karnataka Web BEL-4 LBS 1


ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಜುಲೈ 31ರಂದು ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ನಿರ್ಲಕ್ಷಿಸುವ ರಾಜ್ಯ ಸರಕಾರಗಳ ಕ್ರಮ ಖಂಡಿಸಿ ಮಠಾಧೀಶರ ನೇತೃತ್ವದಲ್ಲಿ ಸುವರ್ಣ ವಿಧಾನಸೌಧದ ಎದುರು ಬೃಹತ್‌ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು 15 ದಿನಗಳಲ್ಲಿ ಸುವರ್ಣ ವಿಧಾನಸೌಧಕ್ಕೆ ಕಚೇರಿ ಸ್ಥಳಾಂತರ ಸೇರಿ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ಭರವಸೆ ನೀಡಿದ್ದರು. ಪ್ರತಿಭಟನೆ ಹಿಂಪಡೆದುಕೊಂಡ ಸಂದರ್ಭದಲ್ಲಿ ನಿಂಡಗುಂದಿ ಸ್ವಾಮೀಜಿಗಳು ಮಾತನಾಡಿ, ಭರವಸೆಗಳು ಈಡೇರದಿದ್ದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ಹೇಳಿದ್ದರು. ಆದರೆ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಭರವಸೆ ನೀಡಿ ನಾಲ್ಕು ತಿಂಗಳುಗಳು ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದರು.

ವೀರೇಂದ್ರಕುಮಾರ ತಾರಿಹಾಳ, ಶ್ರೀಶೈಲ ಪ್ರಸಾದ, ರಾಜು ಕಂಬಾರ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ