ಆ್ಯಪ್ನಗರ

ಸುವರ್ಣಸೌಧಕ್ಕೆ 24 ಕಚೇರಿ ಸ್ಥಳಾಂತರ; ಜಿಲ್ಲಾಧಿಕಾರಿ ಡಾ.ಎಸ್‌.ಬಿ. ಬೊಮ್ಮನಹಳ್ಳಿ ಆದೇಶ

ಸುವರ್ಣಸೌಧಕ್ಕೆ 24 ಕಚೇರಿ ಸ್ಥಳಾಂತರ-ಜಿಲ್ಲಾಧಿಕಾರಿ ಡಾ. ಎಸ್‌. ಬಿ...

Vijaya Karnataka 1 Jul 2020, 5:00 am
ಬೆಳಗಾವಿ: ನಿರೀಕ್ಷೆಯಂತೆ ವಿಭಾಗ ಮಟ್ಟದ ಕಚೇರಿ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ 24 ಕಚೇರಿಗಳನ್ನು ಜುಲೈ ಮೊದಲ ವಾರದಲ್ಲಿಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸುವಂತೆ ಜಿಲ್ಲಾಧಿಕಾರಿ ಡಾ.ಎಸ್‌.ಬಿ. ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.
Vijaya Karnataka Web suvarna vidhana soudha
ಸುವರ್ಣ ವಿಧಾನ ಸೌಧ


ಆರ್ಥಿಕ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಬಾಡಿಗೆ ಕಟ್ಟಡದಲ್ಲಿರುವ ಕಚೇರಿಗಳನ್ನು ಸರಕಾರದ ಕಟ್ಟಡಕ್ಕೆ ಸ್ಥಳಾಂತರಿಸಲು ಸರಕಾರ ನಿರ್ದೇಶನ ನೀಡಿತ್ತು. ಅದೇ ಪ್ರಕಾರ ಜಿಲ್ಲಾಧಿಕಾರಿ ಡಾ.ಎಸ್‌.ಬಿ. ಬೊಮ್ಮನಹಳ್ಳಿ ಅವರು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಬೇಕಿರುವ ಇಲಾಖೆ ಅಧಿಕಾರಿಗಳ ಜತೆಗೆ ಎರಡು ಬಾರಿ ಸಭೆ ನಡೆಸಿದ್ದರು. ಬಾಡಿಗೆ ಕಟ್ಟಡದಲ್ಲಿರುವ ಕಚೇರಿಗಳನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಲು ಅನುಮತಿ ಕೋರಿ ಸರಕಾರಕ್ಕೂ ಪ್ರಸ್ತಾವ ಸಲ್ಲಿಸಿದ್ದರು. ಸರಕಾರದ ಅನುಮೋದನೆ ಸಿಗುತ್ತಿದ್ದಂತೆ ಧಾರವಾಡದಲ್ಲಿಕಾರ್ಯನಿರ್ವಹಿಸುತ್ತಿರುವ ನೀರಾವರಿ ನಿಗಮದ ವಿಭಾಗ ಮಟ್ಟದ ಕಚೇರಿ ಮತ್ತು ವಿವಿಧ ಇಲಾಖೆಗಳ ಜಿಲ್ಲಾಮಟ್ಟದ 23 ಕಚೇರಿಗಳನ್ನು ಜುಲೈ ಮೊದಲ ವಾರದಲ್ಲಿಸ್ಥಳಾಂತರಿಸುವಂತೆ ಬುಧವಾರ ಆದೇಶ ಹೊರಡಿಸಿದ್ದಾರೆ.

ಕಚೇರಿ ಸ್ಥಳಾಂತರಕ್ಕೆ ಈಗಿರುವ ಪೀಠೋಪಕರಣ ಬಳಕೆ ಮಾಡಬೇಕು. ಹೊಸ ಪೀಠೋಪಕರಣ ಖರೀದಿಸದಂತೆ ಆದೇಶದಲ್ಲಿಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿ ಡಾ.ಎಸ್‌.ಬಿ. ಬೊಮ್ಮನಹಳ್ಳಿ ಅವರು ನಿವೃತ್ತಿ ದಿನದಂದೇ ಮಹತ್ವದ ಆದೇಶ ಹೊರಡಿಸಿರುವುದು ವಿಶೇಷ.

ಜಿಲ್ಲಾಮಟ್ಟದ ಕಚೇರಿಗಳನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸುತ್ತಿರುವ ಕುರಿತು 'ಜಿಲ್ಲಾಮಟ್ಟದ ಬಾಡಿಗೆ ಕಚೇರಿಗಳು ಶೀಘ್ರ ಶಿಫ್ಟ್‌' ಶೀರ್ಷಿಕೆಯಲ್ಲಿ'ವಿಜಯ ಕರ್ನಾಟಕ' ವರದಿ ಪ್ರಕಟಿಸಿ ಗಮನ ಸೆಳೆದಿತ್ತು.

ಸ್ಥಳಾಂತರಗೊಂಡಿರುವ ಕಚೇರಿಗಳು
ಧಾರವಾಡದಲ್ಲಿರುವ ನೀರಾವರಿ ನಿಗಮ ನಿಯಮಿತ, ಜಿಲ್ಲಾಉದ್ಯೋಗ ವಿನಿಯಮ ಕಚೇರಿ, ಜಿಲ್ಲಾಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿ, ಜಿಲ್ಲಾಅಂತರ್ಜಲ ಕಚೇರಿ, ಪ್ರವಾಸೋದ್ಯಮ ಇಲಾಖೆ ಕಚೇರಿ, ಸಹಾಯಕ ನಿರ್ದೇಶಕರ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ ಕಚೇರಿ, ಭೂ ಸ್ವಾಧೀನ ಪುನರ್ವಸತಿ ಮತ್ತು ಪುನರ್‌ ನಿರ್ಮಣ ವಿಶೇಷ ಜಿಲ್ಲಾಧಿಕಾರಿಗಳ ಕಚೇರಿ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ, ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ, ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ, ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ, ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಉಪವಿಭಾಗ, ಜಿಲ್ಲಾಮಕ್ಕಳ ರಕ್ಷಣಾ ಘಟಕ, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕಚೇರಿ, ಕರ್ನಾಟಕ ಮಾಹಿತಿ ಆಯೋಗ ಆಯುಕ್ತರ ಕಚೇರಿ, ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆ, ರಾಜ್ಯ ಕೃಷಿ ಮಾರಾಟ ಮಂಡಳಿ ವಿಭಾಗೀಯ ಕಚೇರಿ, ಕೃಷಿ ಮಾರಾಟ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿ, ಉಪ ಮುಖ್ಯ ವಿದ್ಯುತ್‌ ಪರಿವೀಕ್ಷಕರ ಕಚೇರಿ, ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಕೌಶಲಾಭಿವೃದ್ಧಿ ನಿಗಮ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿ, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗ ಅಭಿವೃದ್ಧಿ ನಿಗಮ ಜಿಲ್ಲಾವ್ಯವಸ್ಥಾಪಕರ ಕಚೇರಿ, ದೇವರಾಜ ಅರಸು ಅಭಿವೃದ್ಧಿ ನಿಗಮ ಜಿಲ್ಲಾವ್ಯವಸ್ಥಾಪಕರ ಕಚೇರಿ, ಡಾ.ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಉಪ ಪ್ರಧಾನ ವ್ಯವಸ್ಥಾಪಕರು ಮತ್ತು ಜಿಲ್ಲಾವ್ಯವಸ್ಥಾಪಕರ ಕಚೇರಿಗಳು ಹಾಗೂ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರ ಕಚೇರಿ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ