ಆ್ಯಪ್ನಗರ

ಶಿವಸೇನೆ, ಎನ್‌ಸಿಪಿ ಶಾಸಕರಿಗೆ ವಿಮಾನ ನಿಲ್ದಾಣ ಪ್ರವೇಶ ನಿಷೇಧಿಸಿ

ಬೆಳಗಾವಿ: ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಶಿವಸೇನೆ, ಎನ್‌ಸಿಪಿ ಶಾಸಕರ ಪ್ರವೇಶ ...

Vijaya Karnataka 31 Dec 2019, 5:00 am
ಬೆಳಗಾವಿ: ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಶಿವಸೇನೆ, ಎನ್‌ಸಿಪಿ ಶಾಸಕರ ಪ್ರವೇಶ ನಿಷೇಧಿಸುವಂತೆ ಒತ್ತಾಯಿಸಿ ಸೋಮವಾರ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ವಿಮಾನ ನಿಲ್ದಾಣದ ಆವರಣದಲ್ಲಿಪ್ರತಿಭಟನೆ ನಡೆಸಿ, ನಿಲ್ದಾಣದ ನಿರ್ದೇಶಕ ರಾಜೇಶಕುಮಾರ ಮೌರ್ಯ ಅವರಿಗೆ ಮನವಿ ಸಲ್ಲಿಸಿದರು.
Vijaya Karnataka Web 30LBS1_53
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಶಿವಸೇನೆ, ಎನ್‌ಸಿಪಿ ಶಾಸಕರ ಪ್ರವೇಶ ನಿಷೇಧಿಸುವಂತೆ ಒತ್ತಾಯಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ನಿಲ್ದಾಣದ ನಿರ್ದೇಶಕ ರಾಜೇಶಕುಮಾರ ಮೌರ್ಯ ಅವರಿಗೆ ಮನವಿ ಸಲ್ಲಿಸಿದರು.


ಬೆಳಗಾವಿ ವಿಮಾನ ನಿಲ್ದಾಣದ ಮೂಲಕ ಮುಂಬೈಗೆ ಪ್ರಯಾಣಿಸುವ ನೆಪದಲ್ಲಿಮಹಾರಾಷ್ಟ್ರದ ಜನಪ್ರತಿನಿಧಿಗಳು ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಗಡಿ ವಿವಾದದ ವಿಷಯದಲ್ಲಿಪ್ರಚೋದನೆ ನೀಡಿ ಕನ್ನಡ ಮತ್ತು ಮರಾಠಿಗರ ಭಾವನೆಗಳಿಗೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಚಂದಗಡ ಶಾಸಕ ರಾಜೇಶ ಪಾಟೀಲ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಕನ್ನಡಿಗರ ಸ್ವಾಭಿಮಾನ ಕೆರಳಿಸುವ ಕೆಲಸ ಮಾಡಿದ್ದಾರೆ. ಆದ್ದರಿಂದ ಮಹಾರಾಷ್ಟ್ರದ ಶಿವಸೇನೆ, ಎನ್‌ಸಿಪಿಯ ಸಚಿವರು, ಶಾಸಕರು ಸೇರಿದಂತೆ ಯಾವುದೇ ಜನಪ್ರತಿನಿಧಿಗಳಿಗೆ ಬೆಳಗಾವಿ ವಿಮಾನ ನಿಲ್ದಾಣ ಪ್ರವೇಶಿಸಲು ಅನುಮತಿ ನೀಡಬಾರದು. ಒಂದು ವೇಳೆ ಅವಕಾಶ ನೀಡದರೆ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸೇನೆ ಜಿಲ್ಲಾಧ್ಯಕ್ಷ ಬಾಬು ಸಂಗೋಡಿ, ನಾಗರಾಜ ದೊಡ್ಡಮನಿ, ರಮೇಶ ಮೈಳ್ಯಾಗೋಳ, ಸಂತೋಷ ಗುರಪ್ಪನವರ, ಉದಯ ತಳವಾರ, ವಿಶಾಲ ಗೊಜಗಿ, ಬಸು ದೊಡ್ಡಮನಿ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ