ಆ್ಯಪ್ನಗರ

ರಾಜಕಾರಣದಲ್ಲಿ ಬದುಕಿದ್ದೇವೆಂದು ತೋರಿಸಲು ಸಿದ್ದರಾಮಯ್ಯ ಹೇಳಿಕೆ ನೀಡುತ್ತಾರೆ: ಈಶ್ವರಪ್ಪ!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಈಶ್ವರಪ್ಪ, ​​ರಾಜಕೀಯವಾಗಿ ಬದುಕಿದ್ದೇವೆಂದು ತೋರಿಸಲು, ಸಿದ್ದರಾಮಯ್ಯ ಏನಾದರೂ ಹೇಳಿಕೆ ನೀಡುತ್ತಿರುತ್ತಾರೆ ಎಂದು ಕುಟುಕಿದ್ದಾರೆ.

Vijaya Karnataka Web 29 Nov 2020, 6:28 am
ಬೆಳಗಾವಿ: ಬೆಳಗಾವಿಯಲ್ಲಿ ಡಿ.4ರಂದು ಕೋರ್‌ ಕಮಿಟಿ ಸಭೆ, ಡಿ.5 ರಂದು ಕಾರ್ಯಕಾರಿಣಿ ಸಭೆ ಇದೆ. ಅದರಲ್ಲಿ ಹಿರಿಯ ನಾಯಕರು ಚರ್ಚಿಸಿದ ಬಳಿಕವಷ್ಟೇ, ಮಾಜಿ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ.
Vijaya Karnataka Web Siddaramaiah (left) and KS Eshwarappa
ಸಂಗ್ರಹ ಚಿತ್ರ


ಗೆಲ್ಲುವ ಅಭ್ಯರ್ಥಿಗೆ ಮಾತ್ರ ಟಿಕೆಟ್ ಎಂದಿರುವ ಈಶ್ವರಪ್ಪ, ಬೆಳಗಾವಿ ಲೋಕಸಭೆ ಉಪಚುನಾವಣೆ ಟಿಕೆಟ್ ಹಿಂದುತ್ವವಾದಿಗಳಿಗೆ ಹೊರತು ಮುಸ್ಲಿಮರಿಗಲ್ಲ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡ ಈಶ್ವರಪ್ಪ, ರಾಜಕೀಯವಾಗಿ ಬದುಕಿದ್ದೇವೆಂದು ತೋರಿಸಲು, ಸಿದ್ದರಾಮಯ್ಯ ಏನಾದರೂ ಹೇಳಿಕೆ ನೀಡುತ್ತಿರುತ್ತಾರೆ ಎಂದು ಕುಟುಕಿದ್ದಾರೆ.

ಬೆಳಗಾವಿ ಲೋಕಸಭೆ ಬೈಎಲೆಕ್ಷನ್‌ನಲ್ಲಿ ಮುಸ್ಲಿಮರಿಗೆ ಟಿಕೆಟ್‌ ನೀಡೋದಿಲ್ಲ; ಕೆಎಸ್‌ ಈಶ್ವರಪ್ಪ

ಸಿದ್ದರಾಮಯ್ಯ ಅವರ ವರ್ಚಸ್ಸು ಎಲ್ಲಿದೆ? ಈಚೆಗೆ ನಡೆದ ಎರಡು ಉಪಚುನಾವಣೆಯಲ್ಲಿಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ಬದಾಮಿಯಲ್ಲಿ ಸ್ವಲ್ಪ ಹೆಚ್ಚು ಕಡಿಮೆ ಆಗಿದ್ದರೆ ಸಿದ್ದರಾಮಯ್ಯ ರಾಜಕಾರಣದಲ್ಲೇ ಇರುತ್ತಿರಲಿಲ್ಲ ಎಂದು ಈಶ್ವರಪ್ಪ ವ್ಯಂಗ್ಯವಾಡಿದರು.

ಇನ್ನು ಸಿಎಂ ಮಾಜಿ ರಾಜಕೀಯ ಕಾರ್ಯದರ್ಶಿ ಎನ್‌.ಆರ್‌.ಸಂತೋಷ್‌ ಆತ್ಮಹತ್ಯೆ ಯತ್ನಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೀಡಿರುವ ಹೇಳಿಕೆಯನ್ನೂ ಈಶ್ವರಪ್ಪ ಖಂಡಿಸಿದ್ದಾರೆ.

ಸಿಎಂ ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ: ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲು

ಶಿವಕುಮಾರ್ ವಿಡಿಯೊ ಲೀಕ್‌ ಆಗಿರುವುದಾಗಿ ಹೇಳಿದ್ದಾರೆ. ವಿಡಿಯೋದಲ್ಲಿ ಯಾರಿದ್ದಾರೆಂದು ಬಹಿರಂಗಪಡಿಸಬೇಕು. ಪ್ರಚಾರಕ್ಕಾಗಿ ರಾಜಕಾರಣ ಮಾಡುವುದನ್ನು ಬಿಡಬೇಕು. ಡಿಕೆಶಿ ಅವರ ಈ ರೀತಿಯ ಮುಟ್ಠಾಳತನದ ಹೇಳಿಕೆ ಖಂಡಿಸುವುದಾಗಿ ಈಶ್ವರಪ್ಪ ನುಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ