ಆ್ಯಪ್ನಗರ

ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್‌: ಶಶಿಕಲಾ ಜೊಲ್ಲೆ

ಮಹಿಳೆಯರೆಲ್ಲ ಕೈಜೋಡಿಸಿದಾಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಂಬರ್ ಒನ್ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವರಾದ ಶಶಿಕಲಾ ಜೊಲ್ಲೆ ತಿಳಿಸಿದರು.

Vijaya Karnataka Web 28 Jan 2020, 4:08 pm
ಬೆಳಗಾವಿ: ಅಂಗನವಾಡಿಯಲ್ಲಿನ ಮಕ್ಕಳ‌ ಸಂಖ್ಯೆ ಮತ್ತು ತಿಂಗಳ ಬೆಳವಣಿಗೆ ಸೇರಿ ಅನೇಕ ಮಾಹಿತಿ ಪಡೆಯಲು ಸ್ಮಾರ್ಟ್ ಪೋನ್‌ ಅನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
Vijaya Karnataka Web ಶಶಿಕಲಾ ಜೊಲ್ಲೆ
ಶಶಿಕಲಾ ಜೊಲ್ಲೆ


ನಗರದ ಗಾಂಧಿ ಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸ್ತ್ರೀಶಕ್ತಿ ಸಮಾವೇಶ ಹಾಗೂ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಶಶಿಕಲಾ ಜೊಲ್ಲೆ ಮಾತನಾಡಿದರು.

ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಪ್ರತಿಯೊಂದಕ್ಕೂ ಪೂಜನೀಯ ರೀತಿಯಲ್ಲಿ ನೋಡುತ್ತೇವೆ. ತಾಯಿಗೆ ಮೊದಲನೇ ಸ್ಥಾನ ನೀಡಿದ ದೇಶ ನಮ್ಮದ್ದು. ಪುರುಷರು ಬೆನ್ನೆಲಬಾಗಿ ನಿಂತಾಗ ನಾವು ಬೆಳೆಯಲು ಸಾಧ್ಯ. ಭೂಮಿ, ಪ್ರಕೃತಿ, ನದಿಗಳನ್ನು ಮಹಿಳೆಗೆ ಹೋಲಿಸುತ್ತಾರೆ. ಅಂತಹ ಸಹನಶೀಲತೆ ಮಹಿಳೆಯರಿಗಿದೆ. ಎಲ್ಲ ಕ್ಷೇತ್ರಗಳಲ್ಲಿ ಪುರುಷರಿಗೆ ಸರಿಸಮಾನರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದುದರು.

ಗಂಡು‌ ಮಕ್ಕಳಿಗೆ ಕೂಡ ದೇಶದ ಸಂಸ್ಕೃತಿಯ ಬಗ್ಗೆ ತಿಳಿಹೇಳಬೇಕಿದೆ. ಅಂತಹ ವಾತಾವರಣದಲ್ಲಿ ಬೆಳೆಸಬೇಕು. ಮೂರು‌ ವರ್ಷಗಳಲ್ಲಿ ಕೋಟ್ಯಂತರ ಸಂಘಗಳಿಗೆ ಸಹಾಯಧನ ಮಾಡುವ ಆಲೋಚನೆ ಮಾಡುತ್ತಿದ್ದೇವೆ. ಸಂಘದಲ್ಲಿ ತಯಾರಿಸಿದ ವಸ್ತುಗಳನ್ನು ಮಾರಾಟ ಮಾಡುವ ನಿಟ್ಟಿನಲ್ಲಿ ಇಲಾಖೆಯಿಂದ ಕ್ರಮಕೈಗೊಳ್ಳಲಾಗುವುದು‌. ಸಂಘಗಳಿಗೆ ಹೊಸ ಯೋಜನೆಗಳನ್ನು ಜಾರಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಸಚಿವರು ತಿಳಿಸಿದರು.

ಮಹಿಳೆಯರೆಲ್ಲ ಕೈಜೋಡಿಸಿದಾಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಂಬರ್ ಒನ್ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಸಚಿವರಾದ ಶಶಿಕಲಾ ಜೊಲ್ಲೆ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ