ಆ್ಯಪ್ನಗರ

ಹೆಚ್ಚುವರಿ ಬಸ್‌ ಸಂಚಾರಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಅಥಣಿ: ಒಂದೇ ಬಸ್ಸಿನಲ್ಲಿ ನೂರಾರು ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರು ಗ್ರಾಮಕ್ಕೆ ತೆರಳಲು ತೊಂದರೆಯಾಗುತ್ತಿದ್ದು ಹೆಚ್ಚುವರಿ ಬಸ್‌ ಓಡಿಸುವಂತೆ ಆಗ್ರಹಿಸಿ ...

Vijaya Karnataka 24 Sep 2018, 5:00 am
ಅಥಣಿ: ಒಂದೇ ಬಸ್ಸಿನಲ್ಲಿ ನೂರಾರು ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರು ಗ್ರಾಮಕ್ಕೆ ತೆರಳಲು ತೊಂದರೆಯಾಗುತ್ತಿದ್ದು ಹೆಚ್ಚುವರಿ ಬಸ್‌ ಓಡಿಸುವಂತೆ ಆಗ್ರಹಿಸಿ ಶನಿವಾರ ವಿದ್ಯಾರ್ಥಿಗಳು ಅಥಣಿ ಹೊರವಲಯದ ಸಂತರಾಮ ಕಾಲೇಜು ಬಳಿ ಬಸ್‌ ತಡೆದು ಪ್ರತಿಭಟನೆ ನಡೆಸಿದ ಪ್ರಸಂಗ ನಡೆದಿದೆ.
Vijaya Karnataka Web BEL-23 ATHANI-07


ಅಥಣಿ ಪಟ್ಟಣದಿಂದ ಚಮಕೇರಿ ಗ್ರಾಮಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಹೆಚ್ಚಾಗಿ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳು ತುಂಬಿದ್ದರಿಂದ ಸಂತರಾಮ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಸ್ಥಳಾವಕಾಶ ಇಲ್ಲದ ಕಾರಣ ಬಸ್‌ ತಡೆದು ಪ್ರತಿಭಟಿಸಿದ ವಿದ್ಯಾರ್ಥಿಗಳು ಹೆಚ್ಚುವರಿ ಬಸ್‌ಗಾಗಿ ಅಧಿಕಾರಿಗಳನ್ನು ಆಗ್ರಹಿಸಿದರು.

ಕರವೇ ಕಾರ್ಯಕರ್ತರು ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ನೀಡಿ ಸಾರಿಗೆ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಹೆಚ್ಚುವರಿ ಬಸ್‌ ತರಿಸಿಕೊಂಡ ನಂತರ ಪ್ರತಿಭಟನೆ ಕೈಬಿಡಲಾಯಿತು.

ಈ ವೇಳೆ ಚಮಕೇರಿ ಕರವೇ ಶಾಖಾಧ್ಯಕ್ಷ ಪುಂಡಲೀಕ ಸೂರ್ಯವಂಶಿ ಮಾತನಾಡಿ ಗಡಿಭಾಗದಲ್ಲಿರುವ ಚಮಕೇರಿ, ಬೇಡರಹಟ್ಟಿ, ಅಡಹಳ್ಳಟ್ಟಿ ಗ್ರಾಮಗಳ ಮಾರ್ಗವಾಗಿ ಓಡಾಡುವ ಸಾರಿಗೆ ಬಸ್‌ನಲ್ಲಿ ನೂರಾರು ವಿದ್ಯಾರ್ಥಿಗಳು ಪ್ರಯಾಣಿಸುತ್ತಾರೆ. ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಸಾರಿಗೆ ಬಸ್‌ಗಳ ಸವಲತ್ತು ಇಲ್ಲದ ಕಾರಣ ಶಾಲಾ ಕಾಲೇಜು ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರು ಒಂದೇ ಬಸ್ಸಿನಲ್ಲಿ ಜೋತು ಬಿದ್ದು ಹೋಗುವ ಪ್ರಸಂಗ ನಡೆದಿದೆ. ಒಂದು ಬಸ್‌ನಲ್ಲಿ ಕೇವಲ 52 ಜನ ಪ್ರಯಾಣಿಸಬೇಕು. ಆದರೆ ಈಗ 130ಕ್ಕೂ ಅಧಿಕ ಜನರು ಪ್ರಯಾಣಿಸುತ್ತಿದ್ದಾರೆ. ಇದರಿಂದ ವಯೋವೃದ್ಧರಿಗೆ, ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ತೀವ್ರ ತೊಂದರೆಯಾಗುತ್ತಿದ್ದು, ಸಾರಿಗೆ ಅಧಿಕಾರಿಗಳು ಕೂಡಲೇ ಚಮಕೇರಿ ಮಾರ್ಗದಲ್ಲಿ ಪ್ರತಿದಿನ ಹೆಚ್ಚುವರಿ ಬಸ್‌ ಓಡಿಸಬೇಕು ಎಂದು ಆಗ್ರಹಿಸಿದರು.

ಸಂಜು ಮಾಳಿ, ಗಿರಮಲ್ಲ ತೇಲಿ ಮತ್ತಿತರ ವಿದ್ಯಾರ್ಥಿಗಳು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ