ಆ್ಯಪ್ನಗರ

ಡಿ.1ರಂದು ‘ಸವಿಷ್ಕಾರ’ ತಾಂತ್ರಿಕ, ಸಾಂಸ್ಕೃತಿಕ ಸ್ಪರ್ಧೆ

ಬೆಳಗಾವಿ : ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಸಂಘಟನಾ

Vijaya Karnataka 30 Nov 2018, 5:00 am
ಬೆಳಗಾವಿ : ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಸಂಘಟನಾ ಚಾತುರ‍್ಯತೆ ಹೆಚ್ಚಿಸುವ ಉದ್ದೇಶದಿಂದ ಡಿ.1ರಂದು ನಗರದ ಉದ್ಯಮಬಾಗದ ಜೈನ್‌ ಕಾಲೇಜ್‌ ಆಫ್‌ ಇಂಜಿನಿಯರಿಂಗ್‌ ಆ್ಯಂಡ್‌ ರಿಸರ್ಚ್‌ ಕೇಂದ್ರದಲ್ಲಿ 'ಸವಿಷ್ಕಾರ' ತಾಂತ್ರಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಜೈನ್‌ ಕಾಲೇಜಿನ ಪ್ರಾಚಾರ್ಯ ಡಾ.ಎಸ್‌.ವಿ.ಗೋರಬಾಳ್‌ ಹೇಳಿದರು.
Vijaya Karnataka Web suvishkar technical and cultural competition on dec 1
ಡಿ.1ರಂದು ‘ಸವಿಷ್ಕಾರ’ ತಾಂತ್ರಿಕ, ಸಾಂಸ್ಕೃತಿಕ ಸ್ಪರ್ಧೆ


ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಸಂಘಟನಾ ಶಕ್ತಿ ಬೆಳೆಸುವುದರ ಜತೆಗೆ ಪದವಿಪೂರ್ವ ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳನ್ನು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಮಾಡುವ ಉದ್ದೇಶದಿಂದ ಸವಿಷ್ಕಾರ ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿ ಜಿಲ್ಲೆ ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳ ಪಿಯುಸಿ ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಆಹ್ವಾನ ನೀಡಲಾಗಿದೆ.

ಕಾರ್ಯಕ್ರಮವನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವ ಡಾ.ಜಗನ್ನಾಥ ರೆಡ್ಡಿ ಉದ್ಘಾಟಿಸುವರು. ಅವಿಷ್ಕಾರದಲ್ಲಿ ಡಿಬೇಟ್‌, ಪೋಸ್ಟರ್‌ ಪ್ರಸೆಂಟೇಶನ್‌, ಚಿತ್ರಕಲೆ, ನೃತ್ಯ, ಸಂಗೀತ, ಪೋಟೋಗ್ರಾಫಿ ಸೇರಿದಂತೆ ತಾಂತ್ರಿಕ ವಿಷಯಗಳಲ್ಲಿ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಮತ್ತು ಸ್ಮರಣಿಕೆ ನೀಡಿ ಪ್ರೋತ್ಸಾಹಿಸಲಾಗುವುದು. ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಯಸುವ ವಿದ್ಯಾರ್ಥಿಗಳು ಮೊ.8762190801,8762465301ಗೆ ಸಂಪರ್ಕಿಸಬಹುದು ಎಂದು ತಿಳಿಸಿದರು.

ಉಪನ್ಯಾಸಕ ರವಿ ತಿಳಗಂಜಿ ಸುದ್ದಿಗೋಷ್ಠಿಯಲ್ಲಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ